ತುಮಕೂರು, (ಸೆ.15): ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಪಡೆಯುತ್ತಿದ್ದು, ಸಂಪರ್ಕಕ್ಕೆ ಬಂದವರಿಗೆ ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. 

ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು 

ಈ ಕುರಿತು ಟ್ವಿಟ್‌ ಮಾಡಿರುವ ಅವರು, ನೆನ್ನೆ ಜ್ವರ ಇದ್ದ ಹಿನ್ನೆಲೆಯಲ್ಲಿ ಕರೋನ ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ.  ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಅಂತ ಬರೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಟ್ವೀಟ್ ಮಾಡಿ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.  ಇಂದು ಗೌರಿಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ಮತ್ತೆ ತೊಡಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರು ಕಳೆದ 6 ತಿಂಗಳಿನಿಂದ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಸಹಾಯ ಮಾಡಿದ್ದಾರೆ. ನಾನೂ ಅವರೊಂದಿಗೆ ಹಲವು ಬಾರಿ ಕೈಜೋಡಿಸಿದ್ದೇನೆ ಎಂದಿದ್ದಾರೆ.