ಗ್ರೇಟರ್ ಬೆಂಗಳೂರಾಗಲಿರುವ ತುಮಕೂರು ಹೂಡಿಕೆದಾರರ ಆಕರ್ಷಣೆ ಕೇಂದ್ರವಾಗಬೇಕು: ಸಚಿವ ಪರಮೇಶ್ವರ್
ಬೆಂಗಳೂರು ನಗರದಂತೆ ತ್ವರಿತಗತಿಯಲ್ಲಿ ಅಭಿವೃದ್ಧಿ ಪಥದಲ್ಲಿರುವ ತುಮಕೂರು ಗ್ರೇಟರ್ ಬೆಂಗಳೂರು ಆಗಲಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು. ಅವರು ತುಮಕೂರಿನಲ್ಲಿ ಜಿಲ್ಲೆಯ ಪ್ರಮುಖ ಕೈಗಾರಿಕೆಗಳ ಸಿಇಒ ಹಾಗೂ ಹೂಡಿಕೆದಾರರ ಸಮ್ಮೇಳನದಲ್ಲಿ ಮಾತನಾಡಿದರು.
ತುಮಕೂರು (ಸೆ.19): ಬೆಂಗಳೂರು ನಗರದಂತೆ ತ್ವರಿತಗತಿಯಲ್ಲಿ ಅಭಿವೃದ್ಧಿ ಪಥದಲ್ಲಿರುವ ತುಮಕೂರು ಗ್ರೇಟರ್ ಬೆಂಗಳೂರು ಆಗಲಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು. ಅವರು ತುಮಕೂರಿನಲ್ಲಿ ಜಿಲ್ಲೆಯ ಪ್ರಮುಖ ಕೈಗಾರಿಕೆಗಳ ಸಿಇಒ ಹಾಗೂ ಹೂಡಿಕೆದಾರರ ಸಮ್ಮೇಳನದಲ್ಲಿ ಮಾತನಾಡಿದರು. ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿ, ಆರ್ಥಿಕ ಬೆಳವಣಿಗೆ ತಮ್ಮದೇ ಸೇವೆ ಸಲ್ಲಿಸುತ್ತಿರುವನ್ನು ಸನ್ಮಾನ ಮಾಡಿ ಪ್ರಶಸ್ತಿ ನೀಡುವುದು ಗೌರವದ ವಿಷಯವಾಗಿದೆ ಎಂದರು.
ಎಲ್ಲ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯು ಹೂಡಿಕೆದಾರರ ಆಕರ್ಷಣೆ ಕೇಂದ್ರವಾಗಿ ಹೊರಹೊಮ್ಮಬೇಕು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗಾರಿಕಾ ವಲಯವನ್ನು ಸಮಗ್ರವಾಗಿ ಬೆಳೆಸಲು ಗಂಭೀರ ಪ್ರಯತ್ನ ನಡೆದಿದೆ ಎಂದರು. ಸಾಫ್ಟವೇರ್ ಉದ್ಯಮದಲ್ಲಿ ರಾಜ್ಯದ ಪಾಲು ಶೇಕಡಾ 60 ರಷ್ಟು ಇದ್ದು, ಹಾರ್ಡ್‌ವೇರ್‌ನಲ್ಲಿ ಅಭಿವೃದ್ಧಿ ಹೊಂದಬೇಕು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆಗೆ ಅವಕಾಶ ಇದೆ ಎಂದರು. ಸ್ಟಾರ್ಟ್ ಅಪ್ ಬೆಳೆಯಬೇಕು ಎಂದ ಅವರು ಚಂದ್ರಯಾನ ದಲ್ಲಿ ಸ್ಥಳೀಯ ಕೈಗಾರಿಕಾ ಕೊಡುಗೆ ಇದೆ, ಮೆಟ್ರೋ ತುಮಕೂರು ಜಿಲ್ಲೆಯ ವರೆಗೂ ಪರಿಶೀಲನೆ ಹಂತದಲ್ಲಿದೆ ಎಂದರು.
ಭಾರತೀಯ ಸೇನೆಯ ಬೇಹುಗಾರಿಕೆ ವಿಭಾಗಕ್ಕೆ ಕಾಫಿನಾಡ ಬೆಲ್ಜಿಯಂ ನಾಯಿಗಳು!
ಪಾವಗಡ ಪ್ರಪಂಚದ 3ನೇ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಉತ್ಪಾದನೆ ಮಾಡುವ ಕೇಂದ್ರ ವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಂಟರ್ ಟೈನ್ ಮೆಂಟ್, ಇನ್ನೋವೇಶನ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಇವೆ, ಉದ್ಯಮ ರಂಗ ಹೊಸ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆಯಾಗಲಿದೆ ಎಂದರು. ಜಿಲ್ಲೆಯಲ್ಲಿ ನಡೆದಿರುವ ಈ ಕಾರ‍್ಯಕ್ರಮದಲ್ಲಿ ಉದ್ಯಮ ರಂಗದ ಹೆಚ್ಚು ಮಂದಿ ಪಾಲ್ಗೊಂಡಿದ್ದು, ಎಲ್ಲಾ ಕೈಗಾರಿಕೋದ್ಯಮಿಗಳು ಜಿಲ್ಲೆಯಲ್ಲಿ ಹೂಡಿಕೆ ಮಾಡಬೇಕು ಎಂದರು. ಜಿಲ್ಲಾಧಿಕಾರಿ ಶ್ರೀನಿವಾಸ ಕೆ ಮಾತಾನಾಡಿ ರಸ್ತೆ, ರೈಲ್ವೇ ಮಾರ್ಗ, ನೀರು ಪೂರೈಕೆ, ವ್ಯವಸ್ಥೆ ಸುಗಮವಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಬದ್ದ: ಸಚಿವ ದಿನೇಶ್ ಗುಂಡೂರಾವ್
ಕೈಗಾರಿಕೆಗಳಿಗೆ ಅಗತ್ಯವಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು. ಹಾಗೂ ಜಿಲ್ಲೆಯಲ್ಲಿ ಉದ್ಯಮ ಬೆಳವಣಿಗೆಗೆ ಇರುವ ಅವಕಾಶವನ್ನು ಪ್ರಸ್ತುತ ಪಡಿಸಿದರು. ರಾಜ್ಯ ಎಫ್‌ಕೆಸಿಸಿ ನಿರ್ದೇಶಕ ಸುಜ್ಞಾನ್ ಹಿರೇಮಠ ಮಾತನಾಡಿ, ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದ್ದು, ಅವಕಾಶವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ ಪ್ರಭು. ಮಾತನಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ರಾಜಣ್ಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಮಹಾನಗರ ಪಾಲಿಕೆ ಆಯುಕ್ತ ಆಶ್ವೀಜ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು, ಉಪ ನಿರ್ದೇಶಕ ನಾಗರಾಜು ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳು, ಜನಪ್ರತಿನಿಧಿಗಳು ಮತ್ತಿತರರು ಹಾಜರಿದ್ದರು.