‘ಗುಬ್ಬಿ ಶಾಸಕ ಶ್ರೀನಿವಾಸ್‌ ಅವರೇ... ಮನೆಯಲ್ಲಿ ಕುಳಿತು ಕುಮಾರಸ್ವಾಮಿ ಅವರಿಗೆ ಆವಾಜ್‌ ಹಾಕುವುದಲ್ಲ. ನಿಮಗೆ ತಾಕತ್ತಿದ್ದರೆ ಬೆಂಗಳೂರಿಗೆ ಬನ್ನಿ. ಕಾರ್ಯಕರ್ತರು ನಿಮ್ಮನ್ನು ಬಟ್ಟೆ ಬಿಚ್ಚಿ ಹೊಡೆಯುತ್ತಾರೆ’ ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಪ್ರಕಾಶ್‌ ಎಚ್ಚರಿಕೆ ನೀಡಿದರು. 

ಬೆಂಗಳೂರು (ಜೂ.13): ‘ಗುಬ್ಬಿ ಶಾಸಕ ಶ್ರೀನಿವಾಸ್‌ ಅವರೇ... ಮನೆಯಲ್ಲಿ ಕುಳಿತು ಕುಮಾರಸ್ವಾಮಿ ಅವರಿಗೆ ಆವಾಜ್‌ ಹಾಕುವುದಲ್ಲ. ನಿಮಗೆ ತಾಕತ್ತಿದ್ದರೆ ಬೆಂಗಳೂರಿಗೆ ಬನ್ನಿ. ಕಾರ್ಯಕರ್ತರು ನಿಮ್ಮನ್ನು ಬಟ್ಟೆ ಬಿಚ್ಚಿ ಹೊಡೆಯುತ್ತಾರೆ’ ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಪ್ರಕಾಶ್‌ ಎಚ್ಚರಿಕೆ ನೀಡಿದರು. 

ಭಾನುವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬಂಡಾಯ ಶಾಸಕರ ವಿರುದ್ಧ ಜೆಡಿಎಸ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್‌’ ಎಂಬಂತೆ ಗುಬ್ಬಿ ಜೆಡಿಎಸ್‌ ಶಾಸಕ ಶ್ರೀನಿವಾಸ್‌ ಮನೆಯಲ್ಲಿ ಕುಳಿತು ಬೊಬ್ಬೆ ಹೊಡೆಯುತ್ತಿದ್ದಾರೆ. ಅವರ ನಡೆ ಬಗ್ಗೆ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಅವರು ಬೆಂಗಳೂರಿಗೆ ಬಂದರೆ ಅದರ ಕತೆಯೇ ಬೇರೆ ಆಗಲಿದೆ ಎಂದು ಎಚ್ಚರಿಸಿದರು.

ಕುಮಾರಣ್ಣ-ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ದೀರಾ, ಅದಕ್ಕೆ ನೀವು ಬೆಲೆ ತೆರಲೇಬೇಕು, ಸಿದ್ದುಗೆ ಎಚ್ಚರಿಕೆ

ಶ್ರೀನಿವಾಸ್‌, ಶ್ರೀನಿವಾಸ್‌ಗೌಡ ಇಬ್ಬರೂ ಕಸಾಯಿಖಾನೆಗೆ: ‘ರಾಜ್ಯಸಭೆಯಲ್ಲಿ ಕುಪೇಂದ್ರ ರೆಡ್ಡಿ ಅವರ ಸೋಲು ಎಚ್‌.ಡಿ.ದೇವೇಗೌಡರಿಗೆ ನೋವು ತಂದಿದೆ. ಸಿದ್ದರಾಮಯ್ಯ ವೈಯಕ್ತಿಕ ದ್ವೇಷಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಇನ್ನು ಮುಂದೆ ಒಂದಾಗದಂತೆ ಮಾಡಿದ್ದಾರೆ. ಕಳೆದ ಬಾರಿ 8 ಶಾಸಕರನ್ನು ಕರೆದುಕೊಂಡು ಹೋದರು. ಅದರಲ್ಲಿ ಬಹಳ ಜನ ಕಸಾಯಿಖಾನೆಗೆ ಹೋಗಿದ್ದಾರೆ. ಈಗ ಶಾಸಕರಾದ ಶ್ರೀನಿವಾಸಗೌಡ ಮತ್ತು ಶ್ರೀನಿವಾಸ ಇಬ್ಬರೂ ಕಸಾಯಿಖಾನೆಗೆ ಹೋಗುತ್ತಾರೆ’ ಎಂದು ಹೇಳಿದರು.

ಬದುಕಿರುವಾಗಲೇ ‘ಗುಬ್ಬಿ ಶಾಸಕ ಶ್ರೀನಿವಾಸ್ ತಿಥಿ ಕಾರ್ಡ್’ ವೈರಲ್: ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್‌ ಗೌಡ ಹಾಗೂ ಕೋಲಾರ ಶ್ರೀನಿವಾಸ್ ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಬಿಡದೇ ಜೆಡಿಎಸ್ ಕಾರ್ಯಕರ್ತರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.

ಫೇಸ್​ಬುಕ್​ನಲ್ಲಿ ಪ್ರಚಂಡ ಭೈರವ ಹೆಸರಿನ ಖಾತೆಯಿಂದ ತಿಥಿ ಕಾರ್ಡ್​ ಅಪ್​ಲೋಡ್​ ಆಗಿದ್ದು, ಹಲವರಿಗೆ ಟ್ಯಾಗ್​ ಮಾಡಲಾಗಿದೆ. ಈ ಕಾರ್ಡ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂನ್​ 10ರಂದು ನಿಧನರಾಗಿದ್ದಾರೆ, ಜೂನ್​ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ. ಶ್ರೀನಿವಾಸ್​ರ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್​ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಎಚ್​ಡಿಕೆ ಗರಂ ಆಗಿದ್ದರು. 

ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್​, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನ ಪೂರ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು. ಅಷ್ಟೇ ಅಲ್ಲ, ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಜೆಡಿಎಸ್‌ ತೊರೆದು ಬಿಜೆಪಿ ಸೇರಿದ ಜನತಾ ಪರಿವಾರದ ಪ್ರಭಾವಿ ನಾಯಕ

ಗುಬ್ಬಿ ಶಾಸಕ ಶ್ರೀನಿವಾಸ ಎಚ್‌.ಡಿ.ಕುಮಾರಸ್ವಾಮಿ ಬಗ್ಗೆ ಮಾತಾಡುತ್ತಿರುವ ಬಗ್ಗೆ ಯಾರೂ ತಲೆ ಕೆಡೆಸಿಕೊಳ್ಳಬೇಡಿ. ನಾಯಿ ಮನುಷ್ಯನಿಗೆ ಕಚ್ಚುತ್ತದೆಯೇ ಹೊರತು ಮನುಷ್ಯ ನಾಯಿಗೆ ಕಚ್ಚುವುದಿಲ್ಲ.
-ಸಿ.ಎಂ. ಇಬ್ರಾಹಿ, ಜೆಡಿಎಸ್‌ ರಾಜ್ಯಾಧ್ಯಕ್ಷ