ನವದೆಹಲಿ(ಜ.15): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮೊದಲ ಹೊಡೆತ ಸಿಕ್ಕಿದ್ದು, ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್. ನಾಗೇಶ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.

"

ರಾಣೇಬೆನ್ನುರು ಶಾಸಕ ಆರ್. ಶಂಕರ್ ಮತ್ತು ಮುಳಬಾಗಿಲು ಶಾಸಕ ನಾಗೇಶ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯವುದಾಗಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ಬರೂ ಶಾಸಕರು. ಈ ಮೂಲಕ ಸಂಕ್ರಾಂತಿ ಹಬ್ಬದಂದು ರಾಜ್ಯಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಶಂಕರ್ ಮತ್ತು ನಾಗೇಶ್, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಕ್ಕಿಂತ ಬಿಜೆಪಿ ಸರ್ಕಾರ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಪಕ್ಷೇತರ ಶಾಸಕರು ಬೆಂಬಲ ವಾಪಸ್ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಂಖ್ಯೆ 118ಕ್ಕೆ ಕುಸಿದಿದೆ.

ಮೈತ್ರಿಗೆ ಮೊದಲ ಶಾಕ್: ಜೆಡಿಎಸ್- ಕಾಂಗ್ರೆಸ್ ಸರ್ಕಾರಕ್ಕೆ ಪಕ್ಷೇತರರ ಗುನ್ನ..!