ನಮ್ಮ ಸರ್ಕಾರ ಜನರಿಗೆ ನೀಡಿರುವ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಇದೀಗ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷಿ ಯೋಜನೆಯನ್ನು ಆ. 15ರಿಂದ ಆರಂಭಿಸಲಾಗುವುದು. ಯುವ ನಿಧಿ ಯೋಜನೆಗೆ ಇನ್ನಾರು ತಿಂಗಳಲ್ಲಿ ಚಾಲನೆ ನೀಡಲಾಗುವುದು: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ 

ವಿಜಯಪುರ(ಆ.06): ನಮ್ಮ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಮೂರು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇನ್ನು ಎರಡು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದ ಕಂದಗಲ್‌ ಶ್ರೀಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಸರ್ಕಾರದ ಗ್ಯಾರಂಟಿ ಯೋಜನೆಯಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳಿಗೆ ಶೂನ್ಯ ವಿದ್ಯುತ್‌ ಬಿಲ್‌ ವಿತರಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಸ್ಥಿರ, ಸುಭದ್ರ: ಸಚಿವ ಶಿವಾನಂದ ಪಾಟೀಲ

ನಮ್ಮ ಸರ್ಕಾರ ಜನರಿಗೆ ನೀಡಿರುವ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಇದೀಗ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷಿ ಯೋಜನೆಯನ್ನು ಆ. 15ರಿಂದ ಆರಂಭಿಸಲಾಗುವುದು. ಯುವ ನಿಧಿ ಯೋಜನೆಗೆ ಇನ್ನಾರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.