Asianet Suvarna News Asianet Suvarna News

ಮತ್ತೊಂದು ಸ್ಫೋಟಕ ಗಂಭೀರ ಆರೋಪ ಮಾಡಿದ ಕುಮಾರಸ್ವಾಮಿ

ಸದನದಲ್ಲಿ ಸಚಿವ ಆರ್‌.ಅಶೋಕ್ ಅವರ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಸಿದ್ದಾರೆ.

two national parties are responsible for land dispute Says hdk rbj
Author
Bengaluru, First Published Mar 12, 2021, 3:03 PM IST

ಬೆಂಗಳೂರು, (ಮಾ.12): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ಹಿಂದ 5 ಕೋಟಿ ಡೀಲ್‌ ಎನ್ನುವ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಇದೀಗ ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ ಕೊಟ್ಟ ಉತ್ತರದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಸದನದಲ್ಲಿ ಭೂಕಬಳಿಕೆ ಕುರಿತು ಪ್ರಸ್ತಾಪ ಮಾಡಿದ್ದರು. ಇದಕ್ಕೆ ಉತ್ತರಿಸಿರುವ ಸಚಿವ ಅಶೋಕ್ , ವ್ಯವಸ್ಥೆಯ ಲೋಪದ ಕಾರಣಕ್ಕಾಗಿ ಇಂತಹ ಪ್ರಕರಣದ ಮೇಲೆ ಕಠಿಣ ಕ್ರಮ ಕಷ್ಟ ಎಂದಿದ್ದಾರೆ. ಇನ್ನು ಈ ಬಗ್ಗೆ ಮಾಜೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣ: ಇದು ತಿಪ್ಪೇಸಾರಿಸೋ ತನಿಖೆ, ಎಚ್‌ಡಿಕೆ

 ಇಂದು (ಶುಕ್ರವಾರ) ಭೂಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ ‘ನಿಯಂತ್ರಿಸಲಾಗುತ್ತಿಲ್ಲ,’ ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಂದಾಯ ಸಚಿವ ಆರ್. ಆಶೋಕ್ ಅವರ ಉತ್ತರವೊಂದನ್ನು ಗಮನಿಸಿದೆ. ‘ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿ ಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ’ ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚೆನ್ನಾಗಿರುತ್ತಿತ್ತು ಎಂದು ತಿಳಿಸಿದರು.

‘ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,’ ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು.

ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios