* ರಾಜ್ಯ ಕಾಂಗ್ರೆಸ್ ನಾಯಕರ ಪಿಸು ಮಾತು* ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ* ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯೆ

ಬೆಂಗಳೂರು, (ಅ.13): ಡಿಕೆ ಶಿವಕುಮಾರ್(DK Shivakumar) ವಿರುದ್ಧ ಕಾಂಗ್ರೆಸ್ (Congress) ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಪಿಸು ಮಾತು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಇನ್ನು ಈ ಬಗ್ಗೆ ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಪ್ರತಿಕ್ರಿಯಿಸಿದ್ದು, ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

'ಉಗ್ರಪ್ಪ, ಸಲೀಂ ಗುಟ್ಟೊಂದನ್ನ ರಟ್ಟು ಮಾಡಿದ್ದಾರೆ, ಇದರ ಹಿಂದೆ ಪಿತೂರಿ ಇದೆ'

ಸಿದ್ದರಾಮಯ್ಯನವರ ಶಿಷ್ಯ ಪಡೆ ಖೆಡ್ಡಾ ತೋಡಿದಂತಿದೆ. ಒಂದು ಕಡೆ ತಮ್ಮ ನಾಯಕರನ್ನು ಹೊಗಳುತ್ತಾರೆ. ಇನ್ನೊಂದು ಕಡೆ ನಿಮ್ಮನ್ನು ಬೆತ್ತಲೆ ಮಾಡಲು ಹೊರಟಂತಿದೆ. ಈಗ ಡಿಕೆಶಿ ಯಾವುದಕ್ಕೂ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಸಲಹೆ ನೀಡಿದ್ದಾರೆ.

Scroll to load tweet…

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ.

Scroll to load tweet…