ರಾಯಚೂರು: ಇಂದು ಗಬ್ಬೂರಿಗೆ ಕೇಂದ್ರ ಗೃಹ ಸಚಿವ ಅಮಿತ ಶಾ ಭೇಟಿ
ದೇವದುರ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭವನ್ನು ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಮಾ.26 ಭಾನುವಾರ ಬೆಳಗ್ಗೆ 11ಗಂಟೆಗೆ ಹಮ್ಮಿಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.
ದೇವದುರ್ಗ (ಮಾ.26) : ಇಲ್ಲಿನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭವನ್ನು ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಮಾ.26 ಭಾನುವಾರ ಬೆಳಗ್ಗೆ 11ಗಂಟೆಗೆ ಹಮ್ಮಿಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.
ಈಗಾಗಲೇ ಕಾರ್ಯಕ್ರಮದ ಪೂರ್ವ ಸಿದ್ಧತೆಗಳು ಅಂತಿಮಗೊಂಡಿದ್ದು, ಗಬ್ಬೂರು ಸಮೀಪದ 5 ಎಕರೆ ಪ್ರದೇಶದಲ್ಲಿ 5 ಹೆಲಿಕಾಪ್ಟರ್ಗಳನ್ನು ನಿಲ್ಲಿಸುವುದಕ್ಕಾಗಿ ಹೆಲಿಪ್ಯಾಡ್ಗಳನ್ನು ನಿರ್ಮಿಸಲಾಗಿದೆ. 29 ಎಕರೆಯಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಸುಮಾರು 1 ಲಕ್ಷ 30 ಸಾವಿರ ಆಸನಗಳ ವ್ಯವಸ್ಥೆಯನ್ನು ಮಾಡಿದ್ದು, 9 ಎಕರೆಯಲ್ಲಿ ಊಟದ ವಿಭಾಗವನ್ನು ಮಾಡಲಾಗಿದೆ. ಇಷ್ಟೇ ಅಲ್ಲದೇ ಕಾರ್ಯಕ್ರಮಕ್ಕೆ ಬರುವ ಲಕ್ಷಾಂತರ ಜನರಿಗೆ ಲಡ್ಡು, ಅನ್ನ-ಸಾಂಬರ್, ಪಲ್ಯಾ, ಚಟ್ನಿ ಹಾಗೂ ಶುದ್ಧ ಕುಡಿಯುವ ನೀರುನ್ನು ಒದಗಿಸಿಕೊಡಲಾಗುತ್ತಿದೆ.
ರಾಯಚೂರು: ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಪ್ರಲ್ಹಾದ್ ಜೋಶಿ(Pralhad joshi), ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ(BS Yadiyurappa), ಸಚಿವ ವಿ.ಸೋಮಣ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಸೇರಿ ಇತರರು ಭಾಗವಹಿಸಲಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಇಲಾಖೆ, ವಸತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ವಸತಿ ಇಲಾಖೆ, ಗೃಹ ಇಲಾಖೆ, ಸಾರಿಗೆ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ 4283 ಕೋಟಿ ರು. ಮೊತ್ತದ 220 ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮಾಡಲಾಗುತ್ತಿದೆ.
ರಾಯಚೂರು ಜಿಲ್ಲೆ ದೇವದುರ್ಗ ಸೇರಿ ಏಳು ವಿಧಾನಸಭಾ ಕ್ಷೇತ್ರ(Devadurga assembly constituency)ಗಳಾದ ರಾಯಚೂರು ನಗರ, ಗ್ರಾಮೀಣ, ಮಾನ್ವಿ, ಸಿಂಧನೂರು,ಲಿಂಗಸುಗೂರು, ಮಸ್ಕಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಯಚೂರು ಜಿಲ್ಲೆ ಪಕ್ಕದ ಯಾದಗಿರಿ, ಶಹಾಪುರ, ಸುರಪುರ ಕ್ಷೇತ್ರಗಳಿಂದ ಸುಮಾರು 3 ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ.
ಕಾಂಗ್ರೆಸ್‌ನ ಬಸನಗೌಡರಿಗೆ ತಿರುಗೇಟು ನೀಡುವುದೇ ಬಿಜೆಪಿ?: ರೆಡ್ಡಿ ಪಕ್ಷದಿಂದ ಎದುರಾಗಿದೆ ಮತ ವಿಭಜನೆಯ ಭೀತಿ
ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭಕ್ಕೆ ಕೆಂದ್ರ ಗೃಹ ಸಚಿವ ಅಮಿತ ಶಾ, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವಾರು ಗಣ್ಯರು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಅಗತ್ಯವಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
-ಕೆ.ಶಿವನಗೌಡ ನಾಯಕ, ದೇವದುರ್ಗ ಶಾಸಕ