ಕಾಂಗ್ರೆಸ್‌ನ ಕೆಲ ಸಚಿವರು ಜೋಕರ್‌ಗಳಂತೆ ಮಾತಾಡುತ್ತಿದ್ದಾರೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು ಜೋಕರ್‌ಗಳಂತೆ ಮಾತಾಡುತ್ತಿದ್ದು, ಬಿಜೆಪಿಯವರು ಗೃಹಲಕ್ಷ್ಮಿ ಯೋಜನೆ ಸರ್ವರ್ ಹಾಗೂ ಸಿಸ್ಟಂಗಳನ್ನು ಹ್ಯಾಕ್ ಮಾಡುತ್ತಿದ್ದಾರೆಂಬ ಆರೋಪ ಮಾಡಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ವಿರುದ್ಧ ಹರಿಹಾಯ್ದರು.
ದಾವಣಗೆರೆ (ಜೂ.23): ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು ಜೋಕರ್‌ಗಳಂತೆ ಮಾತಾಡುತ್ತಿದ್ದು, ಬಿಜೆಪಿಯವರು ಗೃಹಲಕ್ಷ್ಮಿ ಯೋಜನೆ ಸರ್ವರ್ ಹಾಗೂ ಸಿಸ್ಟಂಗಳನ್ನು ಹ್ಯಾಕ್ ಮಾಡುತ್ತಿದ್ದಾರೆಂಬ ಆರೋಪ ಮಾಡಿರುವುದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ವಿರುದ್ಧ ಹರಿಹಾಯ್ದರು. ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಕಾಂಗ್ರೆಸ್ ಪಕ್ಷವು ಜನರಿಗೆ ವಂಚನೆ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಪ್ರತಿಭಟನೆಗಳು ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು 60 ವರ್ಷದ ಕಾಂಗ್ರೆಸ್ ಸಾಧನೆ ಮುಂದಿಟ್ಟು ಮತ ಕೇಳಲಿಲ್ಲ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸದಿದ್ದರೆ ಬಿಜೆಪಿ ಹೋರಾಟವಂತೂ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು. ಇಂದಿನಿಂದ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ರೈತ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಜೊತೆಗೆ ಲೋಕಸಭೆ ಚುನಾವಣೆಯಲ್ಲೂ ರಾಜ್ಯಾದ್ಯಂತ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ನಾರಾಯಣ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗೆ ಮಾಡಿದ ‘ಗ್ಯಾರಂಟಿ’: ಮಾಜಿ ಸಚಿವ ಆರ್.ಅಶೋಕ್ ಲೇವಡಿ
ಶೋಷಿರಿಗೆ ಸೌಲಭ್ಯ ಕಲ್ಪಿಸುವಲ್ಲಿ ಬ್ಯಾಂಕ್‌ಗಳ ಉದಾಸೀನ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉದಾಸೀನ ತೋರಲಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಲೀಡ್ ಬ್ಯಾಂಕ್‌ಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಮತ್ತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸದಿದ್ದರೆ ಸರ್ಕಾರಗಳ ಕಾಳಜಿಗಳು ಅರ್ಥ ಕಳೆದುಕೊಳ್ಳುತ್ತವೆ ಎಂದರು.
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ 457 ಅರ್ಜಿಗಳಲ್ಲಿ 187 ಅರ್ಜಿಗಳು ವಿಲೇವಾರಿಯಾಗಿದ್ದು, ಇನ್ನೂ 285 ಅರ್ಜಿಗಳು ಬ್ಯಾಂಕ್ ವ್ಯವಸ್ಥಾಪಕರ ಲಾಗಿನ್‌ನಲ್ಲಿ ಬಾಕಿ ಉಳಿದಿವೆ. ಇದರಿಂದ ರೈತರಿಗೆ ಬೆಳೆ ವಿಮೆಯ ಪರಿಹಾರ ಹಣ ಪಾವತಿಯಾಗಿಲ್ಲ. ಬ್ಯಾಂಕ್ ವ್ಯವಸ್ಥಾಪಕರು ಎರಡು-ಮೂರು ದಿನಗಳಲ್ಲಿ ಈ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಬಾಕಿ ಇರುವ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿ, ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಹಣ ಪಾವತಿಯಾಗುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೋದಿ ಆಡಳಿತಾವಧಿಯಲ್ಲಿ ಸಣ್ಣ ಭ್ರಷ್ಟ್ರಚಾರ ತೋರಿಸಿ: ಸಂಸದ ಸದಾನಂದಗೌಡ
ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭಿಸುವಂತೆ ಸಚಿವರು, ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು. ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಡಿ ಗ್ರಾಮ ಶೇಷಪ್ಪನಹಳ್ಳಿ ಹಾಗೂ ಯಲ್ಲದಕೆರೆ ವ್ಯಾಪ್ತಿಯ ಸುಮಾರು 36 ಕಿಮೀ ವ್ಯಾಪ್ತಿಯಲ್ಲಿ ಒಂದು ಬ್ಯಾಂಕ್ ಶಾಖೆಯೂ ಇರುವುದಿಲ್ಲ. ಈ ಹಿಂದೆ ಯಲ್ಲದಕೆರೆಯಲ್ಲಿದ್ದ ಬ್ಯಾಂಕ್ ಶಾಖೆಯನ್ನು ಮುಚ್ಚಲಾಗಿದೆ. ಈ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್ ಶಾಖೆ ತೆರೆಯುವ ಅಗತ್ಯವಿದೆ. ಶೇಷಪ್ಪನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲೂ ಗ್ರಾಮಸ್ಥರು ಬ್ಯಾಂಕ್ ಶಾಖೆ ತೆರೆಯುವಂತೆ ಮನವಿ ಮಾಡಲಾಗಿತ್ತು. ಶೇಷಪ್ಪನಹಳ್ಳಿ ಅಥವಾ ಯಲ್ಲದಕರೆಯಲ್ಲಿ ಬ್ಯಾಂಕ್ ಶಾಖೆ ತೆರೆಯುವಂತೆ ಎನ್‌ಆರ್‌ಎಲ್‌ಎಂ ಭೋಜರಾಜ ಸಚಿವರಿಗೆ ಮನವಿ ಮಾಡಿದರು.