ಸಿಎಂ ಬೊಮ್ಮಾಯಿ ಕೈ ಬಲಪಡಿಸಿ: ಬಿಜೆಪಿ ವರಿಷ್ಠ ಅಮಿತ್ ಶಾ ಬಹಿರಂಗ ಕರೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈ ಬಲಪಡಿಸಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಬಹಿರಂಗವಾಗಿ ಕರೆ ನೀಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂಬ ಪರೋಕ್ಷ ಸಂದೇಶವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಾನಿಸಿದ್ದಾರೆ.
ಪುತ್ತೂರು (ಫೆ.12): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈ ಬಲಪಡಿಸಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಬಹಿರಂಗವಾಗಿ ಕರೆ ನೀಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂಬ ಪರೋಕ್ಷ ಸಂದೇಶವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರವಾನಿಸಿದ್ದಾರೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೂಲಕ ಸೃಷ್ಟಿಯಾಗಿರುವ, ಕಳೆದ ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿರುವ ‘ಬ್ರಾಹ್ಮಣ ಸಿಎಂ’ ವದಂತಿಗೂ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಕ್ಯಾಂಪ್ಕೊ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಸಾಧನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸುಮಾರು 20 ನಿಮಿಷಗಳ ತಮ್ಮ ಭಾಷಣದುದ್ದಕ್ಕೂ ಅಮಿತ್ ಶಾ ಅವರು ರಾಜ್ಯದಲ್ಲಿ ಬೊಮ್ಮಾಯಿ ಅವರ ಕೈಬಲಪಡಿಸುವಂತೆ ಪದೇ ಪದೇ ಮನವಿ ಮಾಡಿದರು. ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಲು ಹೊರಟಿದೆ. ರಾಜ್ಯದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಸೊಪ್ಪಿನಬೆಟ್ಟಕಾನು ಸಮಸ್ಯೆಗೆ ತಿಂಗಳೊಳಗೆ ಪರಿಹಾರ: ಸಚಿವ ಅಶ್ವತ್ಥ ನಾರಾಯಣ
ಕುಚ್ಚಲಕ್ಕಿ ವಿತರಣೆ, ನಾರಾಯಣಗುರು ಶಾಲೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ರೈತರು ಅಭಿವೃದ್ಧಿ ಕಂಡಿದ್ದಾರೆ. ಅಲ್ಲದೆ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಕೂಡ ರಾಜ್ಯಕ್ಕೆ ಸಾಕಷ್ಟುಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರ ಕೈ ಬಲಪಡಿಸಬೇಕು. ಈ ಮೂಲಕ ಮೋದಿ ಅವರ ಅಭಿವೃದ್ಧಿ ಕಲ್ಪನೆಯನ್ನು ಸಾಕಾರಗೊಳಿಸಬೇಕು ಎಂದು ಹೇಳಿದರು.
ಟಿಪ್ಪು ವರ್ಸಸ್ ರಾಣಿ ಅಬ್ಬಕ್ಕ: ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್ಗೆ ಮತಹಾಕಿದಂತೆ ಎಂದು ಅಭಿಪ್ರಾಯಪಟ್ಟಅಮಿತ್ ಶಾ, ಎರಡೂ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಆರೋಪಿಸಿದರು. ಟಿಪ್ಪು ಸುಲ್ತಾನ್ನನ್ನು ಬೆಂಬಲಿಸುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಮತ ನೀಡುತ್ತೀರಾ ಅಥವಾ ಶೌರ್ಯಕ್ಕೆ ಹೆಸರಾಗಿರುವ ತುಳುನಾಡಿನ ವೀರ ರಾಣಿ ಅಬ್ಬಕ್ಕರನ್ನು ನಂಬುವ ಬಿಜೆಪಿಗೆ ಓಟು ಹಾಕುತ್ತೀರಾ ಎಂಬುದನ್ನು ನೀವೇ ತೀರ್ಮಾನಿಸಿ. ಮೋದಿ ನೇತೃತ್ವದ ರಾಷ್ಟ್ರ ಭಕ್ತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕೋ ಅಥವಾ ಭ್ರಷ್ಟಚಾರದಲ್ಲಿ ಮುಳುಗಿರುವ ಹಾಗೂ ಕರ್ನಾಟಕವನ್ನು ತನ್ನ ಎಟಿಎಂ ಆಗಿ ನೋಡುವ ಗಾಂಧಿ ಪರಿವಾರದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೋ ಎಂದು ನೀವೇ ನಿರ್ಧರಿಸಿ ಎಂದರು.
ಬಿಜೆಪಿ, ಜೆಡಿಎಸ್ ಷಡ್ಯಂತ್ರ ನಡೆಯೋಲ್ಲ: ಪಿ.ಎಂ.ನರೇಂದ್ರಸ್ವಾಮಿ
ಪಿಎಫ್ಐ ಬ್ಯಾನ್ ಮಾಡಿತ್ತು: ಕಾಂಗ್ರೆಸ್ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 1,700 ಮತಾಂಧರ ಮೇಲಿದ್ದ ಪ್ರಕರಣಗಳನ್ನು ಮುಚ್ಚಿ ಬಿಡುಗಡೆ ಮಾಡಿತ್ತು. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸಂಘಟನೆಯನ್ನೇ ಮಟ್ಟಹಾಕಿದರು. ನಕ್ಸಲಿಂ ಅನ್ನು ಮಟ್ಟಹಾಕಿತು. ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದ ಅವರು, ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದುಗೊಳಿಸಿದಾಗ ಕಾಂಗ್ರೆಸ್, ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದವು. ರಕ್ತದ ಓಕುಳಿ ಹರಿಯಬಹುದು ಎಂದು ಹೇಳಿದ್ದರು. ಆದರೆ, ಮೋದಿ ಸರ್ಕಾರ ಯಾವುದೇ ರೀತಿ ತೊಂದರೆಯಾಗದಂತೆ 370ನೇ ವಿಧಿ ತೆಗೆದು ಹಾಕಿತು ಎಂದು ಅವರು ಹೇಳಿದರು. ನೆರೆಯ ಕೇರಳ ಏನೆಂಬುದು ನಿಮಗೆಲ್ಲರಿಗೂ ಗೊತ್ತು. ಹೀಗಾಗಿ ಕರ್ನಾಟಕದ ಸುರಕ್ಷೆ ಬಿಜೆಪಿಯಿಂದ ಮಾತ್ರ ಸಾಧ್ಯ. ಹೀಗಾಗಿ ರಾಜ್ಯದಲ್ಲಿ ಮರಳಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸಿ ಎಂದು ಶಾ ಹೇಳಿದರು.