ಈಗ ನಮ್ಮ ಗುರಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುವುದಕ್ಕೆ ಪೂರಕವಾಗಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು. ಸ್ಥಳೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಗುರಿಯಿಂದ ವಿಚಲಿತರಾಗಬೇಡಿ ಎಂದೂ ಅವರು ತೀಕ್ಷ್ಮವಾಗಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ 

ಬೆಂಗಳೂರು(ಏ.03): ಕಠಿಣ ಎನ್ನುವಂಥ ನಾಲ್ಕು ಲೋಕಸಭಾ ಕ್ಷೇತ್ರಗಳ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಣ್ಣ ಸಣ್ಣ ವಿಷಯಗಳನ್ನು ದೊಡ್ಡದನ್ನಾಗಿ ಮಾಡಬೇಡಿ ಎಂದು ಖಡಕ್ಕಾಗಿ ಸೂಚನೆ ನೀಡಿದ್ದಾರೆ. ಈಗ ನಮ್ಮ ಗುರಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುವುದಕ್ಕೆ ಪೂರಕವಾಗಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು. ಸ್ಥಳೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಗುರಿಯಿಂದ ವಿಚಲಿತರಾಗಬೇಡಿ ಎಂದೂ ಅವರು ತೀಕ್ಷ್ಮವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮಂಗಳವಾರ ಮಧ್ಯಾಹ್ನ ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿ ವಿಶ್ವತ ಮಾಹಿತಿ ಪಡೆದರು. ಬೆಂಗಳೂರಿನಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಜೊತೆ ಸಭೆ ನಡೆಸಿದ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ, ಬಿಎಸ್ ವೈ, ಕುಮಾರಸ್ವಾಮಿ, ವಿಜಯೇಂದ್ರ ಉಪಸ್ಥಿತರಿದ್ದರು.

Lok Sabha Election 2024: ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ಸಿಗೆ ಅಮಿತ್ ಶಾ ಟಿಪ್ಸ್.

ಸಹಜವಾಗಿಯೇ ಅಸಮಾಧಾನಿತ ಮುಖಂಡರು ಆಯ್ಕೆಯಲ್ಲಿ ಆಗಿರುವ ಬೆಳವಣಿಗೆ, ಇತರರ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಕಡೆಗಣನೆ ಮತ್ತಿತರ ವಿಷಯಗಳನ್ನು ಅಮಿತ್ ಶಾ ಅವರ ಮುಂದಿಡುವ ಪ್ರಯತ್ನ ಮಾಡಿದರು. ದಾವಣಗೆರೆಗೆ ಸಂಬಂಧಿಸಿದಂತೆ ಮಾಜಿ ಸಚಿವರಾದ ಗಾಲಿ ಕರುಣಾಕರರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಮತ್ತಿತರರು ತಮ್ಮ ದೂರುಗಳನ್ನು ಹೇಳುವ ಪ್ರಯತ್ನ ಮಾಡಿದರು.

ಆದರೆ ದೂರುಗಳ ಬಗ್ಗೆ ಹೆಚ್ಚು ಆಸಕ್ತಿ ತೋರದ ಅಮಿತ್ ಶಾ ಅವರು, ಸದ್ಯಕ್ಕೆ ಏನೇ ಭಿನ್ನಾಭಿಪ್ರಾಯ ಅಥವಾ ಬಿಕ್ಕಟ್ಟು ಇದ್ದರೂ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆಸಬೇಕು. ಚುನಾವಣೆ ಬಳಿಕ ನಿಮ್ಮ ದೂರುಗಳ ಬಗ್ಗೆ ಎನ್ನಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ಪಾಲ್ಗೊಂಡಿದ್ದರು.