ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಪಕ್ಷದ ರಾಜ್ಯ ನಾಯಕರು ಅಪಸ್ವರ ವ್ಯಕ್ತಪಡಿಸುವುದನ್ನು, ಮೈತ್ರಿ ಧರ್ಮಕ್ಕೆ ಧಕ್ಕೆ ಉಂಟಾಗುವಂತೆ ನಡೆದುಕೊಳ್ಳುವುದನ್ನು ಸಹಿಸುವುದಿಲ್ಲ ಎಂದೂ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ 

ಬೆಂಗಳೂರು(ಫೆ.12): ಮಿತ್ರ ಪಕ್ಷ ಜೆಡಿಎಸ್‌ ನಾಯಕರ ಮೂಲಕ ಲೋಕಸಭಾ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಅಂಥವರನ್ನು ಗುರುತಿಸಿ ರಾಜ್ಯ ಘಟಕದಿಂದ ಟಕೆಟ್‌ಗಾಗಿ ಶಿಫಾರಸು ಬಂದಾಗಲೂ ನಿರಾಕರಿಸುವುದಕ್ಕೂ ಹಿಂದೆ ಮುಂದೆ ನೋಡುವುದಿಲ್ಲ ಎಂದೂ ಅವರು ತೀಕ್ಷ್ಣವಾಗಿ ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಪಕ್ಷದ ರಾಜ್ಯ ನಾಯಕರು ಅಪಸ್ವರ ವ್ಯಕ್ತಪಡಿಸುವುದನ್ನು, ಮೈತ್ರಿ ಧರ್ಮಕ್ಕೆ ಧಕ್ಕೆ ಉಂಟಾಗುವಂತೆ ನಡೆದುಕೊಳ್ಳುವುದನ್ನು ಸಹಿಸುವುದಿಲ್ಲ ಎಂದೂ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ, ಅಮಿತ್‌ ಶಾ ಹೇಳಿಕೆ

ಭಾನುವಾರ ಮೈಸೂರಿನಲ್ಲಿ ನಡೆದ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಕ್ಲಸ್ಟರ್‌ನ ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಅವರು ಜೆಡಿಎಸ್ ನಾಯಕರ ಮನೆಗೆ ಎಡತಾಕುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.