Asianet Suvarna News Asianet Suvarna News

ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ: ಕೇಂದ್ರ ಸಚಿವ ಖೂಬಾ

ಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಬೂತ್‌ಗಳು ಶಕ್ತಿಶಾಲಿಯನ್ನಾಗಿ ಮಾಡಲು ಸಲಹೆ ನೀಡಿದ ಅವರು, ಅಭಿಯಾನಕ್ಕೆ ಸಂಬಂಧಿಸಿದ ಸಂಘಟನಾತ್ಮಕ ಕಾರ್ಯಗಳನ್ನು ಚಾಚೂ ತಪ್ಪದೆ ಮುಗಿಸಲು ಸೂಚಿಸಿದ ಕೇಂದ್ರ ಸಚಿವ ಭಗವಂತ ಖೂಬಾ 

Union Minister Bhagawanth Khuba Talks Over Government Popular Schemes grg
Author
First Published Jan 3, 2023, 11:00 PM IST

ಬೀದರ್‌(ಜ.03):  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಅಭಿವೃದ್ಧಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಜಿಲ್ಲೆಯ 1504 ಬೂತ್‌ಗಳನ್ನು ಚುನಾವಣೆಗೆ ಸಜ್ಜಾಗುವಂತೆ ಕೇಂದ್ರ ಸಚಿವರಾದ ಭಗವಂತ ಖೂಬಾ ಕರೆ ನೀಡಿದರು. ಅವರು ಸೋಮವಾರದಂದು ತಾಲೂಕಿನ ಗಾದಗಿ ಗ್ರಾಮದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಜಿಲ್ಲಾ ಬೂತ್‌ ವಿಜಯ ಅಭಿಯಾನ ಉದ್ಘಾಟಿಸಿ ಮಾತನಾಡಿ, ಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಬೂತ್‌ಗಳು ಶಕ್ತಿಶಾಲಿಯನ್ನಾಗಿ ಮಾಡಲು ಸಲಹೆ ನೀಡಿದ ಅವರು, ಅಭಿಯಾನಕ್ಕೆ ಸಂಬಂಧಿಸಿದ ಸಂಘಟನಾತ್ಮಕ ಕಾರ್ಯಗಳನ್ನು ಚಾಚೂ ತಪ್ಪದೆ ಮುಗಿಸಲು ಸೂಚಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನಾತ್ಮಕ ಕಾರ್ಯಕ್ರಮಗಳಿಗೆ ಒತ್ತು ಕೊಡಬೇಕೆಂದರು.

ವಿಧಾನಪರಿಷತ್‌ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ ಮಾತನಾಡಿ, ರಾಜ್ಯ ಸರ್ಕಾರ ಎಸ್‌ಸಿ ಹಾಗೂ ಎಸ್‌ಟಿ ಮೀಸಲಾತಿ ಹೆಚ್ಚಿಸಿ ದುರ್ಬಲ ಸಮಾಜಕ್ಕೆ ಹೊಸ ಆಯಾಮ ನೀಡಿದ್ದು, ಇದು ಈ ಬಾರಿ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದರು.

ಬೀದರ್‌: 4 ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅಸ್ತು, ಕೇಂದ್ರ ಸಚಿವ ಖೂಬಾ

ವಿಭಾಗೀಯ ಪ್ರಮುಖರಾದ ಈಶ್ವರಸಿಂಗ ಠಾಕೂರ ಮಾತನಾಡಿ, ಬಿಜೆಪಿ ನುಡಿದಂತೆ ನಡೆಯುವ ಪಕ್ಷ. ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷದ ಕಾರ್ಯಕರ್ತರು ನಾವು, ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸೋಣ ಎಂದು ತಿಳಿಸಿದರು.

ಜಿಲ್ಲಾ ಬೂತ್‌ ವಿಜಯ ಅಭಿಯಾನದ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಎಸ್‌. ಪಾಟೀಲ್‌ ಗಾದಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಭಿಯಾನಕ್ಕೆ ಜ. 2ರಂದು ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಮೇಹಕರ್‌ ಏತ ನೀರಾವರಿ ಯೋಜನೆ: ಮೂರು ವರ್ಷಗಳ ಹೋರಾಟಕ್ಕೆ ಸಂದ ಜಯ, ಖಂಡ್ರೆ

ಸಾವಿರಾರು ಕಾರ್ಯಕರ್ತರು, ಗಣ್ಯರನ್ನು ಮಹಾದ್ವಾರದಿಂದ ಮಂಟಪದವರೆಗೆ ಡೊಳ್ಳು, ಪಟಾಕಿ ಸಿಡಿಸುತ್ತಾ ಮೆರವಣಿಗೆಯ ಮೂಲಕ ವೇದಿಕೆಯತ್ತ ಮುಖಂಡರನ್ನು ಬರಮಾಡಿಕೊಳ್ಳಲಾಯಿತು. ನಂತರ ಬೂತ್‌ ಅಧ್ಯಕ್ಷರಾದ ಸಿದ್ದು ಹೊನ್ನಾರ ಮನೆ ಮೇಲೆ ಪಕ್ಷದ ಧ್ವಜ ಹಾರಿಸಿದರು.

ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಪೀರಪ್ಪ ಔರಾದೆ, ಕುಶಾಲ್‌ ಪಾಟೀಲ್‌ ಗಾದಗಿ, ವಿಜಯಕುಮಾರ ಆನಂದೆ, ನಗರ ಅಧ್ಯಕ್ಷ ಶಶಿ ಹೊಸಳ್ಳಿ, ಶಿವಪುತ್ರ ವೈದ್ಯ, ಬಾಬು ವಾಲಿ, ಮಹೇಶ್ವರ ಸ್ವಾಮಿ, ವಿಶ್ವನಾಥ್‌ ಪಾಟೀಲ್‌ ಮಾಡಗೋಳ್‌, ಪ್ರಕಾಶ ಖಿಂಡಿ, ಲಕ್ಷ್ಮಿ ಅಗಸೆ, ಶಿವಕುಮಾರ್‌ ಬೈರನಳ್ಳಿ, ರಾಜು ನೆಮತಾಬಾದ, ದೀಪಕ್‌ ಗಾದಗೆ, ಪಂಡರಿ ಲದ್ದೇ, ರವಿ ಚಿಮಕೋಡ್‌, ಉಪಸ್ಥಿತರಿದ್ದರು. ಈ ಅಭಿಯಾನದಲ್ಲಿ ಪ್ರತಿ ಮತಗಟ್ಟೆಯಲ್ಲಿ 25 ಕಾರ್ಯಕರ್ತರು ಮನೆ ಮೇಲೆ ಧ್ವಜಾರೋಹಣ ಮಾಡಿದರು. 

Follow Us:
Download App:
  • android
  • ios