ಚಿತ್ರದುರ್ಗ, (ಜ.03): ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ  ಡಿವಿ ಸದಾನಂದಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು. ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ.

"

ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಮುಗಿಸಿ ವಾಪಸಾಗುವ ವೇಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಡಿವಿಎಸ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದಾನಂದಗೌಡ್ರ ಆರೋಗ್ಯದಲ್ಲಿ ಏರುಪೇರು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್..! 

ಶುಗರ್ ಲೋ ಆಗಿದ್ದರಿಂದ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದ್ದು, ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯ ವೈದ್ಯರಿಂದ ಸದಾನಂದಗೌಡರಿಗೆ ಚಿಕಿತ್ಸೆ ಮುಂದುವರೆದಿದೆ.

"