ಬೆಂಗಳೂರು, (ಡಿ.19): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು, ಇದಕ್ಕೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಬುದ್ಧಿ ಹೇಳಿದ್ದಾರೆ.

ಚಾಮುಂಡೇಶ್ವರಿ ಚುನಾವಣೆಯಲ್ಲಿ ನನ್ನ ಸೋಲಿಗೆ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಅಂತೆಲ್ಲಾ ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಬಗ್ಗೆ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ,  ರಾಜ್ಯದ ಮುಖ್ಯಮಂತ್ರಿಯಾದವರು, ಒಂದು ಪಕ್ಷದ ಹಿರಿಯರಾದವರು ತಮ್ಮ ಇತಿಮಿತಿಯಲ್ಲಿ ಮಾತನ್ನಾಡಬೇಕು. ಆದರೆ ಮಾಜಿ ಮುಖ್ಯಮಂತ್ರಿಗಳಿಬ್ಬರೂ ತಮ್ಮ ಮಿತಿಯನ್ನು ಮೀರಿ ಮಾತನಾಡಿದ್ದಾರೆ. ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದರು.

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಎಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ರಾಜಕೀಯ ಕುಟುಂಬದಿಂದ ಬಂದವರು. ಅವರ ಪಕ್ಷ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಏನೇನೊ ಹೇಳುತ್ತಾರೆ. ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭಯದಲ್ಲಿ ಏನೇನೋ ಮಾತನಾಡುತ್ತಾರೆ ಎಂದು ಹೇಳಿದರು.