ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೂ ಕೊರೋನಾ ವೈರಸ್ ತಗುಲಿದ್ದು, ತಮ್ಮ ಸಂಪರ್ಕಕ್ಕೆ ಬಂದವರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ, (ನ.19) : ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಸಚಿವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.

ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಕೋವಿಡ್ ದೃಢಪಟ್ಟಿದೆ ಎಂದು ಹೇಳಿದ್ದಾರೆ. ಅಲ್ಲದೆ ವೈದ್ಯರ ಸಲಹೆಯಂತೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದೇನೆ ಎಂದಿದ್ದಾರೆ.

ಸಂಪುಟ ವಿಸ್ತರಣೆ ಮತ್ತೆ ವಿಳಂಬ, ಅಕ್ಷಯ್ ಕಾನೂನು ಹೋರಾಟ ಆರಂಭ; ನ.19ರ ಟಾಪ್ 10 ಸುದ್ದಿ!

ಇನ್ನ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ವಿನಂತಿಯನ್ನು ಮಾಡಿದ್ದಾರೆ.

Scroll to load tweet…