ಬೆಂಗಳೂರು, (ಜ.03): ಲೋ ಶುಗರ್‌ನಿಂದಾಗಿ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನ ಚಿತ್ರದರ್ಗದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಹಾಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಹಾಸ್ಟರ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅಲ್ಲದೇ  ಈ ಬಗ್ಗೆ ಸದಾನಂದಗೌಡ್ರು ಸಹ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.