ಕೇಂದ್ರ ಸಚಿವ ಕುಮಾರಸ್ವಾಮಿ ಅವರು ವೈಷಮ್ಯದ ರಾಜಕಾರಣ, ಹನಿಟ್ರ್ಯಾಪ್ ಮತ್ತು ಇತರ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ, ಇಂತಹ ಕೃತ್ಯಗಳಲ್ಲಿ ತೊಡಗಿರುವವರನ್ನು "ಮರ್ಯಾದೆಗೇಡಿ" ಮತ್ತು "ವಿಷಸರ್ಪ" ಎಂದು ಟೀಕಿಸಿದ್ದಾರೆ. ಭೂ ಒತ್ತುವರಿ ಆರೋಪದ ಬಗ್ಗೆ ಕಾನೂನು ರೀತಿಯಲ್ಲಿ ತೀರ್ಮಾನವಾಗುತ್ತದೆ ಎಂದಿದ್ದಾರೆ. ಸ್ವಪಕ್ಷೀಯರೇ ಆತನ ಮಾನ ಹರಾಜು ಹಾಕಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮಾ.20): ರಾಜ್ಯದಲ್ಲಿ ವೈಷಮ್ಯದ ರಾಜಕಾರಣ ಮಾಡುವುದು, ರಾಜ್ಯ ಮತ್ತು ರಾಷ್ಟ್ರ ನಾಯಕರನ್ನು ಹನಿಟ್ರ್ಯಾಪ್ ಮಾಡಿ ಅದರ ಪೆನ್‌ಡ್ರೈವ್‌ಗಳನ್ನು ಇಟ್ಟುಕೊಂಡು ಜೀವನ ಹಾಳುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗುತ್ತಿರುವವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾರೀ ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು 'ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!

ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್'ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ.

ಇದನ್ನೂ ಓದಿ: ಜೇವರ್ಗಿ-ಚಾಮರಾಜನಗರ ಹೆದ್ದಾರಿ ಚತುಷ್ಪಥವಾಗಿ ಅಭಿವೃದ್ಧಿ ಮಾಡಿ; ಹೆಚ್.ಡಿ.ಕುಮಾರಸ್ವಾಮಿ ಮನವಿ

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು?' ಎಂದು ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Scroll to load tweet…