ಯಾವ ಬಿಡಾಡಿ ಮಂತ್ರಿಗಳಿಂದ ನನ್ನನ್ನು ಏನು ಮಾಡಲೂ ಆಗಲ್ಲ: ಕುಮಾರಸ್ವಾಮಿ ಗುಡುಗು..!

ನನ್ನ ಪ್ರಕರಣದಲ್ಲಿ ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡಲು ಹೊರಟಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲ ಮುಗಿದ ನಂತರ ಈ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಮೈಸೂರು ಪಾದಯಾತ್ರೆಗೆ ನಾನು ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ ಅಷ್ಟೆ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 

Union Minister HD Kumaraswamy Slams Karnataka Ministers grg

ನಾಗಮಂಗಲ(ಸೆ.25):  ರಾಜ್ಯ ಸರ್ಕಾರದ ನಾಲ್ಕೈದು ಮಂದಿ ಬೀದಿಯಲ್ಲಿ ಹೋಗುವ ಮಂತ್ರಿಗಳು ನನ್ನ ವಿರುದ್ಧ ಇಲ್ಲದ ಷಡ್ಯಂತ್ರ ಮಾಡಿ ಜನರ ಹಾಗೂ ನನ್ನ ನಡುವೆ ಕಂದಕ ಸೃಷ್ಟಿ ಮಾಡಲು ಹೊರಟಿದ್ದಾರೆ. ಆದರೆ ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗುಡುಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ತೀರ್ಪು ನೀಡಿರುವ ವಿಚಾರವಾಗಿ ತಾಲೂಕಿನ ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಕರಣದಲ್ಲಿ ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡಲು ಹೊರಟಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲ ಮುಗಿದ ನಂತರ ಈ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಮೈಸೂರು ಪಾದಯಾತ್ರೆಗೆ ನಾನು ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ ಅಷ್ಟೆ ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಂದೆ ಬೇರೆ ರಾಜ್ಯಕ್ಕೆ ಹೋಗ್ತಾರೆ: ಸಚಿವ ಜಮೀರ್ ಅಹ್ಮದ್‌

ಇವರ ಬಗ್ಗೆ ನಾನೇನು ಮಾತಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ನಾನು ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಅವರಿಗೆ ನಾನು ಏನೂ ಹೇಳಲ್ಲ. ಆದರೆ, ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೋದು ಕ್ಲಿಯರ್ ಆಗಬೇಕು ಎಂದರು.

ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಅದೆಲ್ಲ ಕ್ಲಿಯರ್ ಆದ ಬಳಿಕ ಮಾತಾಡುತ್ತೇನೆ. ಮುಖ್ಯಮಂತ್ರಿ ನೈತಿಕಹೊಣೆ ಹೊರಲಿಲ್ಲ ಅಂದರೆ ನಾನು ಹೇಳಲು ಆಗುವುದಿಲ್ಲ. ನನ್ನನ್ನು ಇಕ್ಕಟ್ಟಿಗೆ ಸಿಗಿಸಲು ಹೋಗಿದ್ದಾರೆ. ಇದಕ್ಕೆಲ್ಲ ನಾನು ಹೆದರುವವನಲ್ಲ. ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ಯಾವ ಬಿಡಾಡಿ ಮಂತ್ರಿಗಳಿಂದ ನನ್ನನ್ನು ಏನು ಮಾಡಲೂ ಆಗಲ್ಲ. ಇದನ್ನು ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಎಂದರು.

ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ ಷಡ್ಯಂತ್ರ ನಡೆಸುತ್ತಿದ್ದಾರೆ. ನಾನು ಇದನ್ನು ಷಡ್ಯಂತ್ರ ಅನ್ನನ್ನ, ಈ ಕುಮಾರಸ್ವಾಮಿ ಕೇಂದ್ರ ಸಚಿವನಾಗಿರೋದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಜನರ ಮಧ್ಯೆ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡುತ್ತಿದ್ದಾರೆ.

Latest Videos
Follow Us:
Download App:
  • android
  • ios