Asianet Suvarna News Asianet Suvarna News

ಮುಡಾ ಪಾದಯಾತ್ರೆ: ಸರ್ಕಾರದ ವಿರುದ್ಧ ಹೋರಾಡಲು ಪ್ರಬಲ ಅಸ್ತ್ರ ಸಿಕ್ಕಿದೆ, ಕೇಂದ್ರ ಸಚಿವ ಕುಮಾರಸ್ವಾಮಿ

ಪಾದಯಾತ್ರೆ ಸಮಾರೋಪ ಸಮಾರಂಭ ಕೂಡಾ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಒಟ್ಟಾರೆ ಯಾವುದೇ ಕಾರಣಕ್ಕೂ ಜೆಡಿಎಸ್ ಶಕ್ತಿ ಕುಂದಿಲ್ಲ ಎಂಬುದನ್ನು ಈ ಯಾತ್ರೆ ಮೂಲಕ ಸಾಬಿತು ಪಡಿಸಬೇಕು. ಕಾರ್ಯಕರ್ತರು ಹಾಗೂ ಶಾಸಕರಿಗೆ ಸೂಚನೆ ನೀಡಿದ ಕುಮಾರಸ್ವಾಮಿ 

union minister hd kumaraswamy talks over bjp's muda padayatra grg
Author
First Published Jul 28, 2024, 6:21 PM IST | Last Updated Jul 29, 2024, 9:04 AM IST

ಬೆಂಗಳೂರು(ಜು.28):  ಬಿಜೆಪಿ ಜೊತೆಗೆ ಪಾದಯಾತ್ರೆ ಯಶಸ್ವಿ ಆಗಬೇಕು. ಸರ್ಕಾರದ ವಿರುದ್ಧ ಹೋರಾಟ ಮಾಡಲು ಪ್ರಬಲ ಅಸ್ತ್ರ ಸಿಕ್ಕಿದೆ. ನಿಖಿಲ್ ಕುಮಾರಸ್ವಾಮಿ ಕೂಡಾ ಪಾದಯಾತ್ರೆಯಲ್ಲಿ ಇರ್ತಾರೆ. ಶಾಸಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಳೇ ಮೈಸೂರು ಭಾಗದಲ್ಲೇ ಪಾದಯಾತ್ರೆ ನಡೆಯುತ್ತಿರುವ ಕಾರಣ ನಮ್ಮ ಜವಾಬ್ದಾರಿ ಹೆಚ್ಚು ಇದೆ. ಕಾರ್ಯಕರ್ತರು ಹೆಚ್ಚು ಸಂಖ್ಯೆಯಲ್ಲಿ ಸೇರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು(ಭಾನುವಾರ) ನಗರದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಮನಗರದ ವಿಚಾರದಲ್ಲಿ ಕೂಡಾ ರಾಜಕಾರಣ ಮಾಡಲಾಗ್ತಿದೆ. ಹಾಗಾಗಿ ಈ ಭಾಗದಲ್ಲಿ ಜೆಡಿಎಸ್ ಹೆಚ್ಚು ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. 

ನನ್ನ ಜಾಗ ಡಿನೋಟಿಫಿಕೇಷನ್ ಮಾಡಿ ಅಂಥ ನಿಂಗಪ್ಪ ಸ್ವರ್ಗದಿಂದ ಅರ್ಜಿ ಕೊಟ್ರಾ, ಸಿದ್ದರಾಮಯ್ಯ ಅವರೇ: ಎಚ್‌ಡಿಕೆ ಪ್ರಶ್ನೆ

ಪಾದಯಾತ್ರೆ ಸಮಾರೋಪ ಸಮಾರಂಭ ಕೂಡಾ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಒಟ್ಟಾರೆ ಯಾವುದೇ ಕಾರಣಕ್ಕೂ ಜೆಡಿಎಸ್ ಶಕ್ತಿ ಕುಂದಿಲ್ಲ ಎಂಬುದನ್ನು ಈ ಯಾತ್ರೆ ಮೂಲಕ ಸಾಬಿತು ಪಡಿಸಬೇಕು. ಕಾರ್ಯಕರ್ತರು ಹಾಗೂ ಶಾಸಕರಿಗೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. 

Latest Videos
Follow Us:
Download App:
  • android
  • ios