20-20 ಬಳಿಕ ಯಡಿಯೂರಪ್ಪಗೆ ಅಧಿಕಾರ ನೀಡಲು ನಿರ್ಧರಸಿದ್ದೆ: ಕುಮಾರಸ್ವಾಮಿ
ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕವಾಗಿ ತೀರ್ಮಾನ ಮಾಡಿದ್ದೆ. ಅಧಿಕಾರ ನೀಡಿದ್ದರೆ ಅಂದೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶ ಆಗುತ್ತಿತು. ಆದರೆ, ವಿಧಿ ಆಟದ ಮುಂದೆ ನಮ್ಮದೇನು ನಡೆಯಲಿಲ್ಲ. ಆದರೆ, ಕೆಲವರು ಮಾಡಿದ ಕೃತ್ಯದಿಂದ ನಾನು 14 ವರ್ಷಗಳ ಕಾಲ ವನವಾಸ ಅನುಭವಿಸಿದೆ ಎಂದು ಭಾವುಕರಾದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಚನ್ನಪಟ್ಟಣ(ನ.12): ರಾಜಕೀಯದಲ್ಲಿ ನನಗೆ ಹೆಸರು ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರವೂ ಇದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರದ ವೇಳೆ ಮಾತನಾಡಿದ ಅವರು (2005-06) ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕವಾಗಿ ತೀರ್ಮಾನ ಮಾಡಿದ್ದೆ. ಅಧಿಕಾರ ನೀಡಿದ್ದರೆ ಅಂದೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶ ಆಗುತ್ತಿತು. ಆದರೆ, ವಿಧಿ ಆಟದ ಮುಂದೆ ನಮ್ಮದೇನು ನಡೆಯಲಿಲ್ಲ. ಆದರೆ, ಕೆಲವರು ಮಾಡಿದ ಕೃತ್ಯದಿಂದ ನಾನು 14 ವರ್ಷಗಳ ಕಾಲ ವನವಾಸ ಅನುಭವಿಸಿದೆ ಎಂದು ಭಾವುಕರಾದರು.
ಬೊಂಬೆನಾಡಲ್ಲಿ ಸೂತ್ರದಾರರ ಪ್ರತಿಷ್ಠೆ ಪಣಕ್ಕೆ: ಇಬ್ಬರೂ ಅಭ್ಯರ್ಥಿಗಳಿಗೆ ಸಿನಿಮಾ ನಂಟು
ಮತ್ತೆ ಬಿಜೆಪಿ-ದಳ ಸರ್ಕಾರ:
ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಒಟ್ಟಾಗಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಮೈತ್ರಿ ಹಾಲು ಜೇನಿನಂತೆ ಬೆರೆತು ಹೋಗಿದ್ದು, ಅದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.