ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಹಿಂದೂ ವಿರೋಧಿ ಕೃತ್ಯ ತೀವ್ರ: ಜೋಶಿ
ಈಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಎಫ್‌ಎಸ್‌ಎಲ್ ವರದಿ ಬಂದರೂ ಸಹ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ರಾಮೇಶ್ವರ ಕೆಫೆನಲ್ಲಿ ಬಾಂಬ್ ಬ್ಲಾಸ್ಟ್ ಆದರೂ ಸಹ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ ಎಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ(ಮಾ.20): ರಾಜ್ಯದಲ್ಲೀಗ ಹಿಂದೂ ವಿರೋಧಿ, ದೇಶ ವಿರೋಧಿ ನಡೆ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಮಂಗಳವಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿ ಯಲ್ಲೇ ಏಕೆ ಇಂತಹ ಹಿಂದು ವಿರೋಧಿ ಕೃತ್ಯಗಳು ನಡೆಯುತ್ತಿವೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣವಾಗಿದೆ ಎಂದರು.
ಈಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಎಫ್‌ಎಸ್‌ಎಲ್ ವರದಿ ಬಂದರೂ ಸಹ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ರಾಮೇಶ್ವರ ಕೆಫೆನಲ್ಲಿ ಬಾಂಬ್ ಬ್ಲಾಸ್ಟ್ ಆದರೂ ಸಹ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ ಎಂದರೆ ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದರು.
ಕೆಂದ್ರದಲ್ಲಿ ಪ್ರಮುಖ ಖಾತೆ ಹೊಂದಲು ಕ್ಷೇತ್ರ ಮತದಾರರು ಕಾರಣ: ಸಚಿವ ಪ್ರಲ್ಹಾದ್ ಜೋಶಿ
ಬಿಜೆಪಿಗೆ ಪ್ರತಿಸ್ಪರ್ಧೆಯೇ ಇಲ್ಲ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಇಲ್ಲಿನ ಪೂರ್ವಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ನಾನು ಸಂಸದನಾದ ಬಳಿಕ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ. ಕಾಂಗ್ರೆಸ್ ಇಲ್ಲಿ ಹೆಸರಿಗೆ ಮಾತ್ರ ಎಂದರು. ಬೂತ್‌ಮಟ್ಟದಲ್ಲಿ ಫಲಾನುಭವಿಗಳನ್ನು ಗುರುತಿಸಿ ಕೇಂದ್ರ ಸರ್ಕಾರದ ಕೊಡುಗೆಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದ ಅವರು, ದೇಶದ ಭವಿಷ್ಯವೇ ಈ ಚುನಾವಣೆಯಲ್ಲಿ ಅಡಗಿದೆ. ಮೋದಿ ಮೂರನೆಯ ಬಾರಿಗೆ ಪ್ರಧಾನಿ ಮಾಡುವುದು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಕನಿಷ್ಠ ನಾಲ್ಕು ಲಕ್ಷ ಮತಗಳ ಅಂತರದಿಂದ ಜೋಶಿ ಅವರನ್ನು ಗೆಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕ ಅಶೋಕ ಕಾಟವೆ, ಡಾ. ಕ್ರಾಂತಿ ಕಿರಣ್. ಪೂರ್ವ ಅಧ್ಯಕ್ಷ ಪ್ರಭು ನವಲಗುಂದಮಠ, ಶಿವು ಮೆಣಸಿನಕಾಯಿ, ದತ್ತ ಮೂರ್ತಿ ಕುಲಕರ್ಣಿ, ಜಗದೀಶ್ ಬುಳ್ಳನವರ, ರಂಗಾ ಬದ್ದಿ, ಡಿ.ಕೆ. ಚವ್ಹಾಣ, ನಾರಾಯಣ ಜರತಾರಘರ್ ಯಮನೂರ್ ಜಾಧವ್, ಪಾಲಿಕೆ ಸದಸ್ಯರಾದ ರಾಧಾಬಾಯಿ ಸಫಾರೆ. ಪೂಜಾ ಶೇಜವಾಡ್ಕರ್, ಸುಮಿತ್ರಾ ಗುಂಜಾಳ, ಶಾಂತಕ್ಕ ಹಿರೇಮಠ, ಶೀಲಾ ಕಾಟ್ಕರ್, ಪ್ರೀತಿ ಲದ್ವಾ, ರಾಜು ಜರತಾರಘರ್ ಸೇರಿದಂತೆ ಹಲವರಿದ್ದರು.