ದಾರಿ ತಪ್ಪಿದ ಮಗನಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.
ಧಾರವಾಡ (ಜೂ.30): ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ಇದನ್ನು ಸಿಎಂ ತಮ್ಮ ಬಾಲಂಗೋಚಿಗಳಿಂದ ಹೇಳಿಸ್ತಾ ಇದಾರೆ. ಇತ್ತ ಸಿಎಂ ಅನ್ನೇ ಬದಲಾವಣೆ ಮಾಡಬೇಕು ಅಂತಾ ತಮ್ಮ ಹಿಂಬಾಲಕರಿಂದ ಡಿಸಿಎಂ ಹೇಳಿಸುತ್ತಿದ್ದಾರೆ. ರಾಜ್ಯ ಸರ್ಕಾರ ದಿಕ್ಕು-ದಾರಿ ತಪ್ಪಿದೆ. ದಾರಿ ತಪ್ಪಿದ ಮಗನಂತೆ ಸರ್ಕಾರ ಆಗಿದೆ. ಒಬ್ಬೊಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ ಎಂದು ಹೇಳಿದರು,
ತಮ್ಮದೇ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಅಂತಾ ಹೇಳ್ತಾರೆ. ಏನೇ ಹೇಳಿದರೂ ಕ್ರಮ ಆಗುತ್ತಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹೀಗಾಗಿದೆ. ಗ್ಯಾರಂಟಿ ಕೊಟ್ಟರೂ ಲೋಕಸಭೆಯಲ್ಲಿ ಬಹುಪಾಲು ಬಿಜೆಪಿ ಮುಂದಿತ್ತು. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ಇದರ ಎಲ್ಲ ಪರಿಣಾಮ ರಾಜ್ಯದ ಆಡಳಿತ ಮೇಲೆ ಆಗಿದೆ. ರಾಜ್ಯದ ಆಡಳಿತ ನಿಷ್ಕ್ರೀಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ವಿಫಲ ಆಗಿದ್ದಾರೆ, ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನ ಹರಿಸಬೇಕು ಎಂದರು.
ಆದರೆ ಬೆಲೆ ಏರಿಕೆ ಮಾಡಿ ಜನರ ಹಣ ಪಡೆದು ಜನರಿಗೆ ಕೊಡುತ್ತಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಸಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ. ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಬೀಳಿಸುತ್ತೇವೆಂದು ಬಿಜೆಪಿಗರ ಹೇಳಿದ್ದ ವಿಚಾರವಾಗಿ, ಇದರ ಬಗ್ಗೆ ಹೇಳಿದ್ದಕ್ಕೆ ನಾನೂ ಮೊದಲೂ ಪತ್ರಿಕ್ರಿಯೆ ನೀಡಿರಲಿಲ್ಲ. ಈಗಲೂ ಪ್ರತಿಕ್ರಿಯೆಸಲಾರೆ. ಐದು ವರ್ಷ ಜನ ಅವರಿಗೆ ಅಧಿಕಾರ ಕೊಟ್ಟಿದ್ದಾರೆ ಜನತೆಯ ಆದೇಶ ಐದು ವರ್ಷ ಇದೆ ಎಂದು ತಿಳಿಸಿದರು.
ಸಚಿವ ಭೈರತಿ ಸುರೇಶ್ ರಿಯಲ್ ಎಸ್ಟೇಟ್ ಗಿರಾಕಿ, ಸಿಎಂ ಸಿದ್ದರಾಮಯ್ಯ ಅಪ್ಪಟ ಶಿಷ್ಯ: ಎಚ್.ವಿಶ್ವನಾಥ್
ಐದು ವರ್ಷ ಚೆನ್ನಾಗಿ ಆಡಳಿತ ನಡೆಸಿ ಅಂತಾನೇ ನಾವು ಹೇಳೋದು. ಅವರ ಆಂತರಿಕ ಕಾರಣದಿಂದ ಸರ್ಕಾರ ಬಿದ್ದರೆ ನಾವು ಜವಾಬ್ದಾರರಲ್ಲ. ಆ ಮೇಲೆ ಅದಕ್ಕೆ ಅಪರೇಷನ್ ಕಮಲ ಅಂತಾ ಅವರೇ ಹೇಳ್ತಾರೆ. ಆದರೆ ಆ ವಿಚಾರ ನಮ್ಮ ತಲೆಯಲ್ಲಿಲ್ಲ. ಸಮಾಜ ವಿಜ್ಞಾನ ಪಠ್ಯದಲ್ಲಿ ವೀರಶೈವ ಪದ ತೆಗೆದ ವಿಚಾರವಾಗಿ, ಮತ್ತೆ ಸಮಾಜ ಒಡೆಯುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ವೀರಶೈವ ಲಿಂಗಾಯತ ಅಂತಾ ಮೊದಲು ಇತ್ತು. ಈಗ ವೀರಶೈವ ತೆಗೆದಿದ್ದಾರೆ. ಅನಗತ್ಯವಾಗಿ ಕಿಚ್ಚು ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಜೋಶಿ ಆಕ್ರೋಶವನ್ನು ವ್ಯಕ್ತಪಡಿಸಿದರು.