Asianet Suvarna News Asianet Suvarna News

ಕಾನೂನು ತಿದ್ದುಪಡಿ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಚಳವಳಿ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಕೆ ನೀಡಿದ್ದಾರೆ. 

Union Minister Pralhad Joshi Slams On Congress Govt At Hubballi gvd
Author
First Published Feb 25, 2024, 1:39 PM IST

ಹುಬ್ಬಳ್ಳಿ (ಫೆ.25): ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಬರೀ 9 ತಿಂಗಳಾಗಿವೆ. ಅಷ್ಟರಲ್ಲೇ 1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದೆ. ಹೀಗಾಗಿ, ಆರ್ಥಿಕ ದಿವಾಳಿತನ ಎದುರಿಸುವಂತಾಗಿದೆ. 

ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಹಿಂದೂಗಳ ದೇವಾಲಯಗಳ ಮೇಲೆ ಕಣ್ಣು ಹಾಕಿದೆ. ವಿಧಾನಸಭೆಯಲ್ಲಿ ಈ ಸಂಬಂಧ ಮಸೂದೆಯನ್ನು ಪಾಸು ಮಾಡಿಕೊಂಡಿದೆ. ಆದರೆ, ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿಯವರು ದ್ವೇಷದ ರಾಜಕಾರಣ ಬಿಡಬೇಕು: ಗೃಹ ಸಚಿವ ಪರಮೇಶ್ವರ್

ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ಜಯ: ಇದಕ್ಕೂ ಮೊದಲು ಧಾರವಾಡದಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸುತ್ತದೆ. ಮೋದಿ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.

ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಹಳ್ಳಿಗಳಿಂದ ಕೂಡಿದ ಭಾರತ ಹೈನೋದ್ಯಮದಲ್ಲಿ ಸ್ವಾವಲಂಬನೆ ಸಾಧಿಸಿ ಹಾಲು ಉತ್ಪಾದನೆಯಲ್ಲಿ ಎಲ್ಲಾ ಸ್ಥಾನಗಳನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದ್ದು ಹಾಲು ಉತ್ಪಾದಕರ ಆರ್ಥಿಕ ಪುನಶ್ಚೇತಮಕ್ಕೆ ಸಹಕಾರಿಯಾಗಿದೆ ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿಯವರು ಹೇಳಿದರು. ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಗೋಕುಲ ಮತ್ತು ಸ್ಟೇಪ್ ಯೋಜನೆಗಳ ಮೂಲಕ ಜಾನುವಾರು ಸಾಕಾಣಿಕೆಗೆ ಒತ್ತು ನೀಡುತ್ತಿದೆ. ಹೈನುಗಾರಿಕೆಯು ರೈತರು ಮತ್ತು ಬಡವರ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದರು ಸರಕಾರದ ಸೌಲಭ್ಯಗಳು ಅರ್ಹರಿಗೆ ನೇರವಾಗಿ ತಲುಪಿಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದು ಬಹು ದೊಡ್ಡ ಹೆಜ್ಜೆಯಾಗಿದೆ. ಬಡತನ ನಿರ್ಮೂಲನೆಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ ಪರಿಣಾಮ ದೇಶದ ಆರ್ಥಿಕತೆ ಮೇಲೆ ಬಂದಿದೆ ಎಂದರು.

ಬಿಜೆಪಿಗೆ ಮತ ಕೇಳಲು ಹಿಂಜರಿಕೆಯ ಅವಶ್ಯಕತೆ ಇಲ್ಲ: ಶೋಭಾ ಕರಂದ್ಲಾಜೆ

ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸಿ, ಅದರಿಂದ ಸ್ವಂತ ಉದ್ದಿಮೆ ಪ್ರಾರಂಭಿಸಿ ಉತ್ಪಾದಿಸಲಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ ಇದ್ದು, ಸ್ವಾವಲಂಬಿ ಬದುಕಿಗೆ ಆಧಾರವಾಗಲಿದೆ. ಹೀಗೆ ಜನರನ್ನು ಬಡತನದಿಂದ ಮೇಲೆತ್ತುವ ಹಲವಾರು ಕಾರ್ಯಕ್ರಮಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ರಾಜ್ಯದಲ್ಕಿ ಜಾರಿಯಲ್ಲಿರುವ ಹೈನುಗಾರಿಕೆ ಮತ್ತು ಪಶುಸಂಗೋಪನೆ ಯೋಜನೆಗಳಿಗೆ ಹೆಚ್ಚಿನ ಅನುದಾನದ ಪಾಲನ್ನು ಕೇಂದ್ರ ನೀಡುತ್ತಿದೆ ಎಂದರು.

Follow Us:
Download App:
  • android
  • ios