Asianet Suvarna News Asianet Suvarna News

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಸರ್ಕಾರಕ್ಕೇ ಗ್ಯಾರಂಟಿಯೂ‌ ಇಲ್ಲ: ಪ್ರಲ್ಹಾದ್ ಜೋಶಿ

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನ ಮಾಡಿ‌ ಡಿಕೆಶಿಯನ್ನ ಮೂಲೆಗುಂಪು ಮಾಡುವ ತಂತ್ರ ನಡೆದಿದೆ.

Union Minister Pralhad joshi Slams On Congress Govt At Hubballi gvd
Author
First Published Mar 23, 2024, 1:57 PM IST

ಹುಬ್ಬಳ್ಳಿ (ಮಾ.23): ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನ ಮಾಡಿ‌ ಡಿಕೆಶಿಯನ್ನ ಮೂಲೆಗುಂಪು ಮಾಡುವ ತಂತ್ರ ನಡೆದಿದೆ. ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ‌ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಗ್ಯಾರಂಟಿ‌ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ: ಮಂಡ್ಯ ಟಿಕೆಟ್ ಗೊಂದಲ‌ ವಿಚಾರ, ಸುಮಲತಾ ಅವರ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಒಂದೆರಡು ದಿನಗಳಲ್ಲಿ‌ ಎಲ್ಲ ಸಮಸ್ಯೆ ಬಗೆಹರಿಯುತ್ತೆ. ಕನಿಷ್ಠ 20 ಸ್ಥಾನ ಗೆಲ್ಲದಿದ್ದರೆ ಸಿಎಂ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತೆ ಎಂಬ ಶಾಸಕ‌ ಎಸ್.ಆರ್ ಶ್ರೀನಿವಾಸ ಹೇಳಿಕೆ ವಿಚಾರವಾಗಿ ಅವರು 20 ಕ್ಷೇತ್ರ ಅಂತಾ ಯಾಕೆ ಹೇಳುತ್ತಿದ್ದಾರೋ‌ ಗೊತ್ತಿಲ್ಲ. ಐದಕ್ಕಿಂತ ಹೆಚ್ಚು ಗೆಲ್ಲಲು ಅವರಿಗೆ ಸಾಧ್ಯವಿಲ್ಲ. ಹೀಗಾಗಿ ಸಿದ್ಧರಾಮಯ್ಯ ರಾಜೀನಾಮೆ ಕೊಡಲೇಬೇಕಾಗುತ್ತೆ ಎಂದು ಹೇಳಿದರು.

ಮೇಕೆದಾಟು ಯೋಜನೆಯಲ್ಲಿ ಕಾಂಗ್ರೆಸ್‌ ನಿಲುವೇನು?: ಪ್ರಲ್ಹಾದ್‌ ಜೋಶಿ

ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಕುರಿತು ಪ್ರೀತಂ‌ಗೌಡ ಹೇಳಿಕೆಗೆ ಕಿಡಿ: ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಮಾತನಾಡಿ ಸರಿಮಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ನಾಯಕರು‌ ಮತ್ತು ದೇವೇಗೌಡರ ನಡುವೆ ಮೈತ್ರಿಯ ಮಾತುಕತೆಯಾಗಿದೆ. ನಮಗೆ ಮಾತನಾಡುವ ಅಧಿಕಾರವಿಲ್ಲ. ಪ್ರೀತಂ ಗೌಡ ಅವರೂ ಸಹ‌ ಬಹಿರಂಗ ಹೇಳಿಕೆ‌ ನೀಡೋದನ್ನ ನಿಲ್ಲಿಸಬೇಕು. ನೀವೇನಿದ್ದರೂ ಯಡಿಯೂರಪ್ಪ ವಿಜಯೇಂದ್ರ ಸೇರಿದಂತೆ ನಾಯಕರ ಜೊತೆ ಮಾತನಾಡಿ. ಅದನ್ನು ಬಿಟ್ಟು ಬಹಿರಂಗ ಹೇಳಿಕೆ‌ ನೀಡುವುದನ್ನ ನಿಲ್ಲಿಸಿ. ಶೆಟ್ಟರ್ ಟಿಕೆಟ್ ಇನ್ನೂ‌ ಅಂತಿಮಗೊಳ್ಳದ ವಿಚಾರವಾಗಿ ಇನ್ನೂ‌ ಬೆಳಗಾವಿ ಟಿಕೆಟ್ ಅಂತಿಮವಾಗಿಲ್ಲ. ಹೀಗಿರುವಾಗ ಶೆಟ್ಟರ್ ಅತಂತ್ರ ಹೇಗಾಗುತ್ತಾರೆ. ಎಲ್ಲ ಕಡೆಯೂ ಪರ ಹಾಗೂ ವಿರೋಧದ ಮಾತು‌ಕೇಳಿ ಬರುತ್ತಿದೆ. ಬೆಳಗಾವಿ ಟಿಕೆಟ್ ವಿಚಾರದಲ್ಲಿ‌ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎಂದರು.

Follow Us:
Download App:
  • android
  • ios