ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರ, ವರ್ಗಾವಣೆ ದಂಧೆ: ಪ್ರಲ್ಹಾದ್ ಜೋಶಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಗಮನ ಕೊಡದೆ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ರಾಜ್ಯವನ್ನು ಅಭಿವೃದ್ಧಿ ಮಾಡುವ ಯಾವ ಕಲ್ಪನೆ ಕೂಡ ಇಲ್ಲಿನ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡ (ಆ.06): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಗಮನ ಕೊಡದೆ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ರಾಜ್ಯವನ್ನು ಅಭಿವೃದ್ಧಿ ಮಾಡುವ ಯಾವ ಕಲ್ಪನೆ ಕೂಡ ಇಲ್ಲಿನ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅಳ್ನಾವರ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿ ಸಮಾರಂಭದಲ್ಲಿ ಮಾತನಾಡಿದ ಜೋಶಿ, ಈ ಹಿಂದಿನ ಯುಪಿಎ ಸರ್ಕಾರ, ರೈಲ್ವೆ ಇಲಾಖೆಯ ಬಗ್ಗೆ ಯಾವುದೇ ಅಭಿವೃದ್ಧಿಯ ಕಲ್ಪನೆ ಇಟ್ಟುಕೊಂಡಿರಲಿಲ್ಲ. ದೇಶದಲ್ಲಿ ಮೋದಿ ಸರ್ಕಾರದ ಬಂದ ಮೇಲೆ ರೈಲ್ವೆ ಇಲಾಖೆಯ ಚಿತ್ರಣವೆ ಬದಲಾಗಿದೆ ಎಂದರು.
ಧಾರವಾಡ-ಬೆಳಗಾವಿ ರೈಲು ಮಾರ್ಗ ವಿಳಂಬ ವಿಚಾರವಾಗಿ ಮಾತನಾಡಿ, ಭೂಸ್ವಾಧೀನ ಪ್ರಕ್ರಿಯೆ ಆಗಬೇಕು. ಅರ್ಧಕ್ಕಿಂತ ಹೆಚ್ಚು ಭೂಮಿ ಕೊಡಬೇಕು. ಆಗ ಕಾಮಗಾರಿ ಆರಂಭಿಸಬಹುದು. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು. ಆದರೆ, ರಸ್ತೆ ಮಾಡುವುದಕ್ಕೇ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಕೊಡುವುದೇ ಸಾಕಾಗಿದೆ ಎಂದು ಸಚಿವರೇ ಹೇಳುತ್ತಿದ್ದಾರೆ. ರಸ್ತೆ, ಮೂಲಭೂತ ಸೌಲಭ್ಯಕ್ಕೆ ಇವರೇನು ಹಣ ಕೊಡುವ ಖಚಿತತೆ ಇಲ್ಲ. ವರ್ಗಾವಣೆ ದಂಧೆಗೆ ಇಳಿದಿದ್ದಾರೆ.
ದೇಶದಲ್ಲಿಯೇ ಭರವಸೆಗಳ ಈಡೇರಿಸಿದ ಸರ್ಕಾರ ಕಾಂಗ್ರೆಸ್: ಟಿ.ಬಿ.ಜಯಚಂದ್ರ
ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕರೊಬ್ಬರೇ ಹೇಳಿದ್ದಾರೆ. ಹೀಗಾದರೆ, ರಾಜ್ಯದ ಪರಿಸ್ಥಿತಿ ಹೇಗಿರಬೇಡ?. ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಯಾಗುತ್ತಿಲ್ಲ. ಹೀಗಾಗಿ, ರಸ್ತೆಗಿಳಿದು ಹೋರಾಡಲು ನಮ್ಮ ಶಾಸಕರಿಗೆ ಕರೆ ನೀಡಿದ್ದೇನೆ. ಎಲ್ಲಿ ರಸ್ತೆ ಕೆಟ್ಟಿದೆಯೋ ಅಲ್ಲಿ ನಮ್ಮ ಶಾಸಕರು ಹೋರಾಟ ಮಾಡಲಿದ್ದಾರೆ ಎಂದರು. ನೈಸ್ ರಸ್ತೆ ಬಗ್ಗೆ ಎಚ್‌ಡಿಕೆ ದಾಖಲೆ ಬಿಡುಗಡೆ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರು ದಾಖಲೆಗಳನ್ನು ಕೊಡಲಿ. ಅದರ ಬಗ್ಗೆ ಸೂಕ್ತವಾದ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಹರಾಜು: ವರ್ಗಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಹುದ್ದೆಗೂ ದೊಡ್ಡಮಟ್ಟದ ಹರಾಜು ನಡೆಯುತ್ತಿದೆ. ಅನುಮಾನವೇ ಇಲ್ಲ. ಅತ್ಯಂತ ಭ್ರಷ್ಟಸರ್ಕಾರ ಇದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳು ಮುಗಿದಿಲ್ಲ. ಮಳೆಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಕೊಡುತ್ತಿಲ್ಲ. ರಸ್ತೆ ಕೆಟ್ಟಿವೆ ಯಾವುದೇ ಬಗೆಯ ಅಭಿವೃದ್ಧಿ ಮಾಡಿಲ್ಲ. ಬರೀ ವರ್ಗಾವಣೆ ದಂಧೆಯಲ್ಲಿ ಈ ಸರ್ಕಾರ ತೊಡಗಿದೆ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪವನ್ನು ಸಮರ್ಥಿಸಿಕೊಂಡರು.
ಚುನಾವಣೆ ಗೆಲ್ಲಲು ಗ್ಯಾರಂಟಿ ಅನೌನ್ಸ್ ಮಾಡಿದ್ದರು. ಆ ಗ್ಯಾರಂಟಿಗೆ ನೂರೆಂಟು ಕಂಡೀಷನ್ ಹಾಕಿ, ಇವತ್ತು ಅದನ್ನು ಸರಿಯಾಗಿ ಕೊಡುತ್ತಿಲ್ಲ. ಸಂಪೂರ್ಣ ಅಭಿವೃದ್ಧಿ ಬಂದ್ ಆಗಿದೆ. ಭ್ರಷ್ಟಾಚಾರ ಒಂದು ರೀತಿಯಲ್ಲಿ ಮುಗಿಲು ಮುಟ್ಟಿದೆ. ಫ್ರೀ ಅಂತಾರೆ, ಬಸ್‌ಗಳು ಸಂಚರಿಸಲು ರಸ್ತೆ ಬೇಕಲ್ಲ. ಗೊಂದಲ, ಜನ ವಿರೋಧಿ ಸರ್ಕಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಂಬಾಕಿಗೆ ಪರ್ಯಾಯವಾಗಿ ರೇಷ್ಮೆ ಬೆಳೆಯಿರಿ: ರೈತರಿಗೆ ಸಚಿವ ವೆಂಕಟೇಶ್ ಸಲಹೆ
ಗೃಹ ಜ್ಯೋತಿ ಬರುವ ಮುಂಚೆ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದರು. ಕಂಡೀಷನ್ ಹಾಕಿ ಕೊಡುವಂತಹದ್ದು ಏನಿದೆ? ಭಾರತ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಕಲ್ಲಿದ್ದಲ್ಲನ್ನು ಉತ್ಪಾದನೆ ಮಾಡಿ, ದೇಶದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಲು ರಾಜ್ಯಗಳಿಗೂ ನಾವು ಕೊಟ್ಟಂತ ಪ್ರೋತ್ಸಾಹ ಕಾರಣವಿದೆ. ಅದನ್ನು ನಾವೇ ಕೊಡುತ್ತೇವೆ ಅಂಥ ಹೇಳುವ ರೀತಿಯಲ್ಲಿ ದುರಹಂಕಾರದಿಂದ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸವನ್ನು ಸಂಪೂರ್ಣ ಮರೆಮಾಚಿದ್ದಾರೆ. ಜನ ಸೂಕ್ತ ಉತ್ತರ ನೀಡುತ್ತಾರೆ ಎಂದರು.