ಗೃಹಲಕ್ಷ್ಮೀ ಯೋಜನೆಯ ಆ್ಯಪ್‌ ಅನ್ನು ಕೇಂದ್ರ ಸರ್ಕಾರ ಹ್ಯಾಕ್‌ ಮಾಡಿದೆ ಎಂಬ ಸತೀಶ್‌ ಜಾರಕಿಹೊಳಿ ಆರೋಪಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ಕಿಡಿಕಾರಿದ್ದಾರೆ. ಸಚಿವರೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದ್ದಾರೆ. 

ಧಾರವಾಡ (ಜೂ.21): ಗೃಹಲಕ್ಷ್ಮೀ ಯೋಜನೆಯ ಆ್ಯಪ್‌ ಅನ್ನು ಕೇಂದ್ರ ಸರ್ಕಾರ ಹ್ಯಾಕ್‌ ಮಾಡಿದೆ ಎಂಬ ಸತೀಶ್‌ ಜಾರಕಿಹೊಳಿ ಆರೋಪಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತೀವ್ರ ಕಿಡಿಕಾರಿದ್ದಾರೆ. ಸಚಿವರೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ತಿರುಗೇಟು ನೀಡಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ನೀವೀಗ ಮಂತ್ರಿಯಾಗಿದ್ದೀರಿ, ಭಾವಿ ಮುಖ್ಯಮಂತ್ರಿ ಅಂತೀರಿ. ತುಸು ಗಂಭೀರವಾಗಿ ಮಾತನಾಡಿ. ಈ ರೀತಿಯ ಹೇಳಿಕೆಗಳನ್ನು ನೀಡಿ ರಾಜ್ಯದ ಮರ್ಯಾದೆ ತೆಗೆಯಬೇಡಿ. ಆ್ಯಪ್‌ ಹ್ಯಾಕ್‌ ಆಗಿದ್ದರೆ ಸೈಬರ್‌ ಕ್ರೈಂಗೆ ದೂರು ನೀಡಿ ಎಂದು ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಆಕ್ರೋಶ ಹೊರಹಾಕಿದರು.

ರಾಜ್ಯ ಸರ್ಕಾರಕ್ಕೆ ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡಲಾಗುತ್ತಿಲ್ಲ. ಹಾಗಾಗಿ ಯೋಜನೆ ಜಾರಿ ವಿಳಂಬ ಮಾಡಲು ಈ ರೀತಿಯ ವ್ಯವಸ್ಥಿತ ಹುನ್ನಾರ ಮಾಡಲಾಗುತ್ತಿದೆ. ಕೈಲಾಗದವನು ಮೈಯೆಲ್ಲ ಪರಚಿಕೊಂಡನಂತೆ ಎನ್ನುವ ಮಾತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನ್ವಯಿಸುತ್ತಿದೆ. ಕಾಂಗ್ರೆಸ್‌ಗೆ ಇನ್ನೂ ಸಮಯ ಕೊಡುತ್ತೇವೆ. ಆದಷ್ಟುಶೀಘ್ರ ಜನರಿಗೆ ಕೊಟ್ಟಭರವಸೆಗಳನ್ನು ಈಡೇರಿಸದಿದ್ದಲ್ಲಿ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಘನ ತ್ಯಾಜ್ಯ ಕಂಪನಿ ಹಣ ದುರ್ಬಳಕೆ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಕೇಂದ್ರದಿಂದ ಸರ್ವರ್‌ ಹ್ಯಾಕ್‌: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿ ವಿಳಂಬವಾಗುತ್ತಿರುವ ನಡುವೆಯೇ ಇದೀಗ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗೃಹಲಕ್ಷ್ಮೇ ಯೋಜನೆಯ ಆ್ಯಪ್‌ ಅನ್ನು ಕೇಂದ್ರ ಸರ್ಕಾರ ಹ್ಯಾಕ್‌ ಮಾಡಿದೆ ಎಂದು ಕಿಡಿಕಾರಿದ್ದಾರೆ. ಅನ್ನಭಾಗ್ಯ ಯೋಜನೆ ಜಾರಿಗಾಗಿ ರಾಜ್ಯಕ್ಕೆ ಅಕ್ಕಿ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ನಗರದ ಕಾಂಗ್ರೆಸ್‌ ಭವನದಿಂದ ರಾಣಿ ಚೆನ್ನಮ್ಮ ವೃತ್ತದವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಂಗಳವಾರ ಮಾತನಾಡಿದರು.

ಕುಟುಂಬದ ಒಡತಿಗೆ ಮಾಸಿಕ 2000 ಗೌರವಧನ ನೀಡುವ ಗೃಹಲಕ್ಷ್ಮೀ ಯೋಜನೆಯ ಆ್ಯಪ್‌ ಅನ್ನು ಕೇಂದ್ರ ಸರ್ಕಾರ ಹ್ಯಾಕ್‌ ಮಾಡಿದೆ. ರಾಜ್ಯ ಸರ್ಕಾರದ ಯೋಜನೆಗಳಿಗೆ ಈ ರೀತಿ ಅಡ್ಡಿಪಡಿಸಿ ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಅರ್ಧ ಅವಧಿಗೆ ಸಿದ್ದರಾಮಯ್ಯ ಸಿಎಂ ಎಂದು ಯಾರೂ ಹೇಳಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಈ ತಿಂಗಳು ವಿಳಂಬ?: ಈ ತಿಂಗಳು ಜನತೆಗೆ 10 ಕೆ.ಜಿ.ಅಕ್ಕಿ ನೀಡಲು ವಿಳಂಬ ಆಗಬಹುದು. ಮುಂದಿನ ತಿಂಗಳಿಂದ 10 ಕೆ.ಜಿ. ಅಕ್ಕಿ ನೀಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಸರ್ಕಾರ ಮಾಡುತ್ತಿದೆ. ಕೇಂದ್ರದಲ್ಲಿ ಏಳು ಲಕ್ಷ ಟನ್‌ ಅಕ್ಕಿ ದಾಸ್ತಾನಿದೆ. ನಾವು 2 ಲಕ್ಷ ಟನ್‌ ಅಕ್ಕಿಗೆ ಬೇಡಿಕೆ ಇಟ್ಟಿದ್ದೇವೆ. ಆದರೆ ನಿಮಗೆ ಕೊಡಲು ಆಗಲ್ಲ, ಖಾಸಗಿಯವರಿಗೆ ನೀಡುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿಸಿದರು.