*   ವಾಸ್ತವ ಅಂಕಿ- ಅಂಶ ಮರೆಮಾಚಿದೆ ಪುಸ್ತಕ*  ಯುಪಿಎ ಅವಧಿಯಲ್ಲಿ ಒಂದು ಕುಟುಂಬ ಅಭಿವೃದ್ಧಿಯಾಗಿದ್ದು ಬಿಟ್ಟರೆ ಬೇರೇನೂ ಆಗಿಲ್ಲ*  ಮೋದಿ ಕುರಿತ ಸಿದ್ದು ಪುಸ್ತಕ ಸುಳ್ಳಿನ ಕಂತೆ: ಕೇಂದ್ರ ಸಚಿವ ಜೋಶಿ ಟೀಕೆ

ಬೆಂಗಳೂರು(ಜು.03): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎಂಟು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಸ್ತವ ಅಂಕಿ- ಅಂಶಗಳನ್ನೇ ಮರೆಮಾಚಿ ಸುಳ್ಳಿನ ಕಂತೆಯಂತಿರುವ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ.

ಇಡೀ ದೇಶದ ಭದ್ರತೆಯನ್ನು ಯುಪಿಎ ಸರ್ಕಾರ ಮರೆತಿದ್ದಾಗ, ಸಬ್ಸಿಡಿಗಳಿಂದಲೇ ಸಾಲ ಕೂಪದಲ್ಲಿ ಮುಳುಗಿದ್ದಾಗ ದೇಶವನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡಿದ್ದು ಇದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ. ನಿತ್ಯವೂ ಶತಕೋಟಿ ರು. ಮೊತ್ತದಲ್ಲಿ ಭ್ರಷ್ಟಾಚಾರ, ಹಗರಣಗಳನ್ನೇ ನಡೆಸುತ್ತಿದ್ದ ಯುಪಿಎ ಸರ್ಕಾರ ಕಾಲದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ತ್ವರಿತವಾಗಿ ಕಾರ್ಯ ಎಸಗುವಂತೆ ಮಾಡಿದ್ದು ಈ ಸರ್ಕಾರದ ಹೆಗ್ಗಳಿಕೆ. ದೇಶ 21ನೇ ಶತಮಾನದತ್ತ ದಾಪುಗಾಲಿಕ್ಕುತ್ತಿದ್ದರೂ, ಇನ್ನೂ ಬ್ರಿಟಿಷ್‌ ಕಾಲದ ನೀತಿಗಳು, ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಕೆಟ್ಟಆರ್ಥಿಕ ನೀತಿಗಳನ್ನೇ ಸಿದ್ದರಾಮಯ್ಯ ಅಭಿವೃದ್ಧಿ ಎಂದು ಹೇಳುತ್ತಿದ್ದಾರೆ. ರಾಜ್ಯಕ್ಕೆ ಈಗಿನ ಕೇಂದ್ರ ಸರ್ಕಾರ ಕೊಟ್ಟಷ್ಟುಅನುದಾನ, ಬೆಂಬಲವನ್ನು ಹಿಂದಿನ ಬೇರಾವ ಸರ್ಕಾರಗಳೂ ಕೊಟ್ಟಿಲ್ಲ ಎಂದು ಪ್ರತಿಪಾದಿಸಿದ್ದಾರೆ.

Karnataka Politics: ಬಿಜೆಪಿ ಎಂದೂ ಗೆಲ್ಲದ ಕ್ಷೇತ್ರ ಗೆಲ್ಲೋಣ: ಸಿಎಂ ಬೊಮ್ಮಾಯಿ

ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಕೊಟ್ಟ ಕೊಡುಗೆ ಏನು? ತನ್ನ ಸಾಧನೆ ಏನು? ಎಂಬುದನ್ನು ಮೊದಲು ಸಿದ್ದರಾಮಯ್ಯ ಹೇಳಬೇಕು. ಯುಪಿಎ ಅವಧಿಯಲ್ಲಿ ಒಂದು ಕುಟುಂಬ ಅಭಿವೃದ್ಧಿಯಾಗಿದ್ದು ಬಿಟ್ಟರೆ ಬೇರೇನೂ ಆಗಿಲ್ಲ. ಅಪ್ರಬುದ್ಧ ರಾಜಕಾರಣಿ ರಾಹುಲ್‌ಗಾಂಧಿ ಅವರನ್ನು ಮೆಚ್ಚಿಸಲು ಸಿದ್ದರಾಮಯ್ಯ ಗುಲಾಮಗಿರಿ ಮಾಡುತ್ತಿದ್ದು, ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರಕಟಣೆ ಮೂಲಕ ವಾಗ್ದಾಳಿ ನಡೆಸಿದ್ದಾರೆ.