ಚುನಾವಣೆ ಬಂದಾಗಲೆಲ್ಲಾ ಸಿದ್ದು ಅಬ್ಬೇಪಾರಿ: ಪ್ರಹ್ಲಾದ್‌ ಜೋಶಿ ಲೇವಡಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿಗೆ ಹೋದರೂ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಿಲ್ಲ. ಹೀಗಾಗಿ, ಪ್ರತಿ ಸಲ ಚುನಾವಣೆ ಬಂದಾಗ ಅವರು ಅಬ್ಬೇಪಾರಿಯಂತೆ ಕ್ಷೇತ್ರ ಹುಡುಕಿಕೊಂಡು ಓಡಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. 

Union Minister Pralhad Joshi Slams To Siddaramaiah at Hubballi gvd

ಹುಬ್ಬಳ್ಳಿ (ನ.14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಿಗೆ ಹೋದರೂ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಿಲ್ಲ. ಹೀಗಾಗಿ, ಪ್ರತಿ ಸಲ ಚುನಾವಣೆ ಬಂದಾಗ ಅವರು ಅಬ್ಬೇಪಾರಿಯಂತೆ ಕ್ಷೇತ್ರ ಹುಡುಕಿಕೊಂಡು ಓಡಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ಗೆದ್ದಾಗ ಅವರು ಕೆಲಸ ಮಾಡಲಿಲ್ಲ. ಹೀಗಾಗಿ, ಅಲ್ಲಿಯ ಜನ ಅವರನ್ನು ಸೋಲಿಸಿ ಮನೆಗೆ ಕಳಿಸಿದರು. 

ಬಾದಾಮಿಯಲ್ಲಿ ಏನು ಪುಣ್ಯ ಇತ್ತೋ ಏನೋ, ಆರಿಸಿ ಬಂದರು. ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಂತಹ ಉನ್ನತ ಹುದ್ದೆ ಅಲಂಕರಿಸಿ, ದೊಡ್ಡ ನಾಯಕರಾದವರಿಗೆ ಇಂತಹ ಗತಿ ಬರಬಾರದಿತ್ತು ಎಂದು ಲೇವಡಿ ಮಾಡಿದರು. ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಏನು ಕೆಲಸ ಮಾಡಿದ್ದೀರಿ ಎಂದು ಕೋಲಾರದ ಜನ ಅವರನ್ನು ಪ್ರಶ್ನಿಸಬೇಕು. ಅಷ್ಟಕ್ಕೂ, ಸಿದ್ದರಾಮಯ್ಯನವರು ಇನ್ನು ಸ್ವಲ್ಪ ದಿನದಲ್ಲಿ ಯಾವ ಪಾರ್ಟಿಗೆ ಹೋಗ್ತಾರೆ ನೋಡೋಣ ಎಂದರು.

ಸಿದ್ದು ವಿರುದ್ಧ ಅಚ್ಚರಿಯ ಅಭ್ಯರ್ಥಿ ಕಣಕ್ಕೆ: ಸಚಿವ ಶ್ರೀರಾಮುಲು

ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಜನರಿಂದ ತಕ್ಕ ಪಾಠ: ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ಸ್ಥಾಪನೆಗೆ ನಮ್ಮ ವಿರೋಧ ಇದೆ. ಟಿಪ್ಪು ಪ್ರತಿಮೆ ಸ್ಥಾಪನೆಗೆ ಬೆಂಬಲ ನೀಡುವವರನ್ನು ಮನೆಗೆ ಕಳುಹಿಸಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಈ ಮೂಲಕ ಟಿಪ್ಪು ಪ್ರತಿಮೆ ನಿರ್ಮಿಸುವುದಾಗಿ ಹೇಳಿದ ಶಾಸಕ ತನ್ವೀರ್‌ ಸೇಠ್‌ಗೆ ಕೇಂದ್ರ ಸಚಿವ ತಿರುಗೇಟು ನೀಡಿದರು. 

ಸುದ್ದಿಗಾರರೊಂದಿಗೆ ಮಾತನಾಡಿ ಟಿಪ್ಪು ಒಬ್ಬ ಮತಾಂಧ, ಹಿಂದೂ ವಿರೋಧಿ, ದೇಶ ದ್ರೋಹಿ ಹಾಗೂ ಕನ್ನಡ ವಿರೋಧಿ ಎಂಬುದು ನನ್ನ ವೈಯಕ್ತಿಕ ಹಾಗೂ ಪಕ್ಷದ ಸ್ಪಷ್ಟನಿಲುವಾಗಿದೆ. ಯಾವುದೇ ಪ್ರತಿಮೆ ಸ್ಥಾಪನೆಗೆ ಸರ್ಕಾರದ ಅನುಮತಿ ಬೇಕು. ಟಿಪ್ಪು ಪ್ರತಿಮೆ ನಿರ್ಮಿಸಿ ಪೂಜಿಸಿ, ಆರತಿ ಮಾಡುತ್ತಾರೆಯೇ ನೋಡೋಣ ಎಂದು ಪ್ರಶ್ನಿಸಿದ ಅವರು, ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ. ನಾವು ಯಾವಾಗ ಉತ್ತರ ನೀಡಬೇಕೋ ಆಗ ನೀಡುತ್ತೇವೆ. ತುಷ್ಟೀಕರಣದ ರಾಜಕಾರಣಕ್ಕಾಗಿ ಹೀಗೆಲ್ಲ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಸತೀಶ್‌ ಜಾರಕಿಹೊಳಿ ಬಹಿರಂಗ ಕ್ಷಮೆಯಾಚಿಸಲಿ: ಹಿಂದು ನಮ್ಮ ಪದವೇ ಅಲ್ಲ. ಇದು ಪರ್ಷಿಯನ್‌ನಿಂದ ಬಂದಿರುವ ಪದ. ಹಿಂದು ಪದದ ಅರ್ಥ ಅಶ್ಲೀಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಖಂಡನೀಯವಾಗಿದ್ದು, ಕೂಡಲೇ ಅವರು ಬಹಿರಂವಾಗಿ ಕ್ಷಮೆಯಚಿಸಬೇಕು ಎಂದು ಕೇಂದ್ರದ ಸಂಸದೀಯ ವ್ಯವಹಾರ ಹಾಗೂ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು. ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ನಂತರ ಮಂಗಳವಾರ ಮಾತನಾಡಿದರು. ಅಜ್ಞಾನಿಗಳ ಬಾಯಲ್ಲಿಯೇ ಇಂತಹ ಮಾತುಗಳು ಬರುತ್ತವೆ, ಪ್ರಜ್ಞಾವಂತಿಕೆಯಿಲ್ಲದ ಸತೀಶ ಜಾರಕಿಹೊಳಿ ಅವರು ಇಡೀ ನಮ್ಮ ಸಂಸ್ಕೃತಿಗೆಯನ್ನೇ ಹಿಯಾಳಿಸಿ ಮಾತನಾಡಿದ್ದು ಕೂಡಲೇ ಹಿಂದುಗಳಿಗೆ ಕ್ಷಮೆಯನ್ನು ಕೇಳಬೇಕು ಎಂದು ಒತ್ತಾಯಿಸಿದರು.

ಕೋಲಾರದಲ್ಲಿ ಸಿದ್ದುಗಿರುವ ಸಮಸ್ಯೆ ಶ್ರೀನಿವಾಸ್‌ಗೌಡ: ಎಚ್‌ಡಿಕೆ

40 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹ: ಎಲ್ಲೆಡೆ ಉತ್ತಮ ಮಳೆಯಾಗಿದ್ದು ಅನ್ಯ ಮೂಲಗಳಿಂದ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ. ಇದರಿಂದಾಗಿ ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಸ್ಥಾವರಗಳಿಗೆ ಬೇಡಿಕೆ ತಗ್ಗಿದೆ. ಮುಂದಿನ ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕರೆಂಟ್‌ ಅಭಾವ ಸೃಷ್ಠಿಯಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ಆ ನಿಟ್ಟಿನಲ್ಲಿ ದೇಶದ ವಿವಿಧ ಗಣಿಗಳಿಂದ ಕಲ್ಲಿದ್ದನ್ನು ತರಿಸಿಕೊಂಡು ಸಂಗ್ರಹಿಸಿ ಬೇಸಿಗೆ ಸಮಯದಲ್ಲಿ ಶಾಖೋತ್ಪನ್ನ ಸ್ಥಾವರಗಳಿಗೆ ಅಗತ್ಯವಾದ ರೀತಿಯಲ್ಲಿ ಕಲ್ಲಿದ್ದಲನ್ನು ಪೂರೈಕೆ ಮಾಡಲಾಗುವುದು ಎಂದು ಹೇಳಿದರು.

Latest Videos
Follow Us:
Download App:
  • android
  • ios