ಮೋದಿ ಬಂದ ಮೇಲೆ ರೈಲ್ವೆ ಇಲಾಖೆ ಚಿತ್ರಣ ಬದಲು: ಪ್ರಲ್ಹಾದ್ ಜೋಶಿ
ಈ ಹಿಂದಿನ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ರೈಲ್ವೆ ಇಲಾಖೆಯ ಬಗ್ಗೆ ಯಾವುದೇ ಅಭಿವೃದ್ಧಿಯ ಕಲ್ಪನೆಯನ್ನು ಇಟ್ಟುಕೊಂಡಿರಲಿಲ್ಲ. ದೇಶದಲ್ಲಿ ಮೋದಿ ಸರ್ಕಾರದ ಬಂದ ಮೇಲೆ ರೈಲ್ವೆ ಇಲಾಖೆಯ ಚಿತ್ರಣವೆ ಬದಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅಳ್ನಾವರ (ಆ.07): ಈ ಹಿಂದಿನ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ರೈಲ್ವೆ ಇಲಾಖೆಯ ಬಗ್ಗೆ ಯಾವುದೇ ಅಭಿವೃದ್ಧಿಯ ಕಲ್ಪನೆಯನ್ನು ಇಟ್ಟುಕೊಂಡಿರಲಿಲ್ಲ. ದೇಶದಲ್ಲಿ ಮೋದಿ ಸರ್ಕಾರದ ಬಂದ ಮೇಲೆ ರೈಲ್ವೆ ಇಲಾಖೆಯ ಚಿತ್ರಣವೆ ಬದಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಅಮೃತ ಭಾರತ ನಿಲ್ದಾಣ ಯೋಜನೆಯಡಿ ಭಾನುವಾರ ಅಳ್ನಾವರ ರೈಲ್ವೆ ನಿಲ್ದಾಣದ ಅಡಿಗಲ್ಲು ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿನ ಸಣ್ಣ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ 508 ರೈಲ್ವೆ ನಿಲ್ದಾಣ ಆಯ್ಕೆ ಮಾಡಲಾಗಿದೆ. ಅದರಲ್ಲಿ ಅಳ್ನಾವರ ನಿಲ್ದಾಣವನ್ನು 17.2 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇ ಏರಿಸಲಾಗುವುದು ಎಂದರು. ಇದನ್ನು ಕೇವಲ ರೈಲ್ವೆ ನಿಲ್ದಾಣಗಳನ್ನಾಗಿ ನೋಡದೇ, ಆಕರ್ಷಣೀಯ ಕೇಂದ್ರಗಳನ್ನಾಗಿ ಮಾಡಲಾಗುತ್ತಿದೆ. ಇದೀಗ ದೇಶದಲ್ಲಿ 47 ಸಾವಿರ ಕೋಟಿಯ ಅಭಿವೃದ್ಧಿ ಕಾಮಗಾರಿ ಚಾಲನೆಯಲ್ಲಿವೆ. ಅಣ್ಣಿಗೇರಿ ಗೇಟ್ ಮತ್ತು ಅಳ್ನಾವರ ಸೇತುವೆ ಕಾಮಗಾರಿಗೆ 30 ಕೋಟಿ ಅನುದಾನವನ್ನು ಕೇಂದ್ರದಿಂದ ನೀಡಲಾಗಿದೆ ಹಾಗೂ 20 ಸಾವಿರ ಕಿ.ಮೀ. ವಿದ್ಯುದೀಕರಣ ಮಾಡಲಾಗಿದೆ ಎಂದರು.
ಮೆದುಳು ನಿಷ್ಕ್ರಿಯತೆ: ಸಮಾಜ ಸೇವಕಿ ಸಹನಾ ಜೋನ್ಸ್ ರೂಬೆನ್ ಅವರ ಅಂಗಾಗಗಳ ದಾನ
ಈ ಹಿಂದೆ 2009ರಲ್ಲಿ ಮುನಿಯಪ್ಪ ಅವರು ಕೇಂದ್ರ ರೈಲ್ವೆ ಸಚಿವರಿದ್ದಾಗ ಕರ್ನಾಟಕಕ್ಕೆ .900 ಕೋಟಿ ನೀಡಿದ್ದನ್ನು ಸಂಸತ್‌ನಲ್ಲಿ ಕಾಂಗ್ರೆಸ್ ಸಂಸದರು ಟೇಬಲ್ ಬಾರಿಸುವ ಮೂಲಕ ಹೆಗಲು ಬಾರಿಸಿಕೊಂಡಿದ್ದರು. ಆದರೆ, ಕಳೆದ ಒಂದು ಬಜೆಟ್‌ನಲ್ಲಿ ಮೋದಿ ಸರ್ಕಾರ .7 ಸಾವಿರ ಕೋಟಿ ನೀಡಿದೆ ಎಂದು ಜೋಶಿ ಕಾಂಗ್ರೆಸ್ಸಿಗೆ ಟಾಂಗ್ ನೀಡಿದರು. ನೈಋುತ್ಯ ರೈಲ್ವೆ ಉಪ ವ್ಯವಸ್ಥಾಪಕ ಸಂಜು ಕಿಶೋರ ಮಾತನಾಡಿ, ಅಮೃತ ಭಾರತ ಸ್ಟೇಷನ್ ಯೋಜನೆಯಡಿಯ ಹುಬ್ಬಳ್ಳಿ ವಿಭಾಗದಲ್ಲಿ 6 ನಿಲ್ದಾಣಗಳು ಆಯ್ಕೆಯಾಗಿವೆ. ಅದರಲ್ಲಿ ಅಳ್ನಾವರ ನಿಲ್ದಾಣ .17.2 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಶಾಸಕ ಮಹೇಶ ಟೆಂಗಿನಕಾಯಿ, ಭರತಕುಮಾರ ಜೈನ್, ನಾರಾಯಣ ಮೋರೆ, ರೈಲ್ವೆ ಅಧಿಕಾರಿ ಹರ್ಷಿತ ಇದ್ದರು.
ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರ, ವರ್ಗಾವಣೆ ದಂಧೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಗಮನ ಕೊಡದೇ ಭ್ರಷ್ಟಾಚಾರ ಮತ್ತು ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ರಾಜ್ಯವನ್ನು ಅಭಿವೃದ್ಧಿ ಮಾಡುವ ಯಾವ ಕಲ್ಪನೆ ಇಲ್ಲಿನ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡ-ಬೆಳಗಾವಿ ರೈಲು ಮಾರ್ಗ ವಿಳಂಬ ವಿಚಾರವಾಗಿ ಮಾತನಾಡಿದ ಜೋಶಿ, ಭೂಸ್ವಾಧೀನ ಪ್ರಕ್ರಿಯೆ ಆಗಬೇಕು. ಅರ್ಧಕ್ಕಿಂತ ಹೆಚ್ಚು ಭೂಮಿ ಕೊಡಬೇಕು. ಆಗ ಕಾಮಗಾರಿ ಆರಂಭಿಸಬಹುದು. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು. ಆದರೆ, ರಸ್ತೆ ಮಾಡುವುದಕ್ಕೇ ಹಣವಿಲ್ಲ ಎಂದು ಹೇಳುತ್ತಿದ್ದಾರೆ.
ಆಲಮಟ್ಟಿ ಡ್ಯಾಂ ಭರ್ತಿಗೆ ಒಂದೇ ದಿನ ಬಾಕಿ: ಸಿಎಂ ಬಾಗಿನ ಅರ್ಪಿಸುವ ಸಾಧ್ಯತೆ!
ಗ್ಯಾರಂಟಿ ಕೊಡುವುದೇ ಸಾಕಾಗಿದೆ ಎಂದು ಸಚಿವರು ಹೇಳುತ್ತಿದ್ದಾರೆ. ರಸ್ತೆ, ಮೂಲಭೂತ ಸೌಲಭ್ಯಕ್ಕೆ ಇವರೇನು ಹಣ ಕೊಡುವ ಖಚಿತತೆ ಇಲ್ಲ. ವರ್ಗಾವಣೆ ದಂಧೆಗೆ ಇಳಿದಿದ್ದಾರೆ. ಸರ್ಕಾರ ಎಷ್ಟುದಿನ ಇರುತ್ತದೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕರೊಬ್ಬರು ಹೇಳಿದ್ದಾರೆ. ಹೀಗಾದರೆ ರಾಜ್ಯದ ಪರಿಸ್ಥಿತಿ ಹೇಗಿರಬೇಡ? ರಸ್ತೆಗಳ ಅಭಿವೃದ್ಧಿಯಾಗುತ್ತಿಲ್ಲ. ಹೀಗಾಗಿ ರಸ್ತೆಗಿಳಿದು ಹೋರಾಡಲು ನಮ್ಮ ಶಾಸಕರಿಗೆ ಕರೆ ನೀಡಿದ್ದೇನೆ. ಎಲ್ಲಿ ರಸ್ತೆ ಕೆಟ್ಟಿದೆಯೋ ಅಲ್ಲಿ ನಮ್ಮ ಶಾಸಕರು ಹೋರಾಟ ಮಾಡಲಿದ್ದಾರೆ ಎಂದರು. ನೈಸ್ ರಸ್ತೆ ಬಗ್ಗೆ ಎಚ್‌ಡಿಕೆ ದಾಖಲೆ ಬಿಡುಗಡೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರು ದಾಖಲೆಗಳನ್ನು ಕೊಡಲಿ. ಅದರ ಬಗ್ಗೆ ಸೂಕ್ತವಾದ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.