ಸಚಿವ ಎಸ್ ಸುರೇಶ್ ಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ನಂತ್ರ, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಬೆಂಗಳೂರು, (ಅ.07) : ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೂ ಇಂದು (ಬುಧವಾರ) ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದೀಗ ಅವರು ವೈದ್ಯರ ಸಲಹೆ ಮೇರಿಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಪ್ರಹ್ಲಾದ್ ಜೋಶಿ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದಾರೆ.
ಒಂದು ಪಾಸಿಟಿವ್ ಕತೆ! ಕೊರೋನಾ ಬಂತು, ಕೊರೋನಾ ಹೋಯ್ತು, ನಡುವೆ ಏನಾಯ್ತು?
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಇದೀಗ ಅವರಿಗೂ ಕೊರೋನಾ ಆತಂಕ ಶುರುವಾಗಿದೆ.
