ಕಾಂಗ್ರೆಸ್ ಗ್ಯಾರಂಟಿಯಿಂದ ಯಾವುದೇ ಯೋಜನೆಗೆ ಹಣ ಇಲ್ಲ: ರಾಜೀವ್ ಚಂದ್ರಶೇಖರ್
ಹೊಸದಾಗಿ ರಚನೆ ಮಾಡಲಾದ ಜಿಲ್ಲೆಗಳಲ್ಲಿನ ಕಚೇರಿಗಳಿಗೆ ಕುರ್ಚಿ ಮತ್ತು ಟೇಬಲ್‌ಗಳನ್ನು ಒದಗಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಸಚಿವರೊಬ್ಬರು ಹೇಳಿದ್ದಾರೆ.
ನವದೆಹಲಿ (ಅ.07): ಹೊಸದಾಗಿ ರಚನೆ ಮಾಡಲಾದ ಜಿಲ್ಲೆಗಳಲ್ಲಿನ ಕಚೇರಿಗಳಿಗೆ ಕುರ್ಚಿ ಮತ್ತು ಟೇಬಲ್‌ಗಳನ್ನು ಒದಗಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಸಚಿವರೊಬ್ಬರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆ ನಾಶವಾಗಲಿದೆ ಎಂದು ನಾನು ಹೇಳಿದ್ದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತೊಮ್ಮೆ ರಾಜ್ಯದ ಗ್ಯಾರಂಟಿ ಯೋಜನೆಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಜಾರಿಕೊಳ್ಳಲಿದೆ ಎಂದು ನಾನು ಈ ಹಿಂದೆ ಹೇಳಿದ್ದೆ.
ಈ ಹಿಂದೆ ಈ ವರ್ಷ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಇದೀಗ ಹೊಸ ಜಿಲ್ಲೆಗಳಲ್ಲಿ ಕುರ್ಚಿ ಮತ್ತು ಟೇಬಲ್ ಖರೀದಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಸಚಿವರೊಬ್ಬರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಎಲ್ಲಾ ಹಣ ಎಲ್ಲಿ ಹೋಯಿತು ಎಂಬುದನ್ನು ಹೇಳುತ್ತಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ರಾಹುಲ್ ಅವರು ಹೇಳಿರುವ ಗ್ಯಾರಂಟಿಗಳ ನಿಜವಾದ ಅರ್ಥ ಇದೇ ಆಗಿದೆ. ಇದು ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕತೆಯನ್ನು ನಾಶ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ ಗಲಭೆ ಆರೋಪಿಗಳ ಎನ್‌ಕೌಂಟರ್ ಮಾಡಿ: ಎಂ.ಪಿ.ರೇಣುಕಾಚಾರ್ಯ
ಜಾಲತಾಣಗಳಿಗೆ ಕೇಂದ್ರದ ನೋಟಿಸ್: ಭಾರತದ ಇಂಟರ್ನೆಟ್‌ನಲ್ಲಿ ಅಪರಾಧಿ ಮತ್ತು ಅಪಾಯಕಾರಿ ಅಂಶಗಳನ್ನು ನೀಡುವುದರ ವಿರುದ್ಧ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಶುಕ್ರವಾರ ಹೇಳಿದ್ದಾರೆ. ಅಲ್ಲದೇ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ತೆಗೆದುಹಾಕುವಂತೆ ಎಕ್ಸ್, ಯೂಟ್ಯೂಬ್ ಮತ್ತು ಟೆಲಿಗ್ರಾಂ ಜಾಲತಾಣಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ‘ನಾವು ಎಕ್ಸ್, ಯೂಟ್ಯೂಬ್, ಟೆಲಿಗ್ರಾಂಗಳಿಗೆ ಅವುಗಳ ಜಾಲತಾಣದಲ್ಲಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ತೆಗೆದುಹಾಕುವಂತೆ ನೋಟಿಸ್ ಜಾರಿ ಮಾಡಿದ್ದೇವೆ.
ಮಳೆ-ಬೆಳೆ ಇಲ್ಲ, ಪರಿಹಾರ ಕೊಡದೆ ಇದ್ದ ವಿಷವೇ ಗತಿ: ಕೇಂದ್ರ ಬರ ಅಧ್ಯಯನ ತಂಡದ ಎದುರು ಆತ್ಮಹತ್ಯೆಗೆ ಯತ್ನ
ಐಟಿ ನಿಯಮಗಳ ಪ್ರಕಾರ ಸುರಕ್ಷಿತ ಮತ್ತು ಭರವಸೆಯ ಇಂಟರ್ನೆಟ್ ರಚನೆ ಮಾಡಲು ಸರ್ಕಾರ ಬದ್ಧವಾಗಿದೆ. ಐಟಿ ಕಾಯ್ದೆಯ ಪ್ರಕಾರ ಜಾಲತಾಣದಗಳು ತಮ್ಮ ವೇದಿಕೆಯಲ್ಲಿ ಇಂತಹ ವಿಷಯಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಐಟಿ ಕಾಯ್ದೆಯ 79ನೇ ನಿಯಮದಡಿ ಅವುಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆಯಲಾಗುತ್ತದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಈ ನೋಟಿಸ್‌ನ ಅನ್ವಯ ಈ ಜಾಲತಾಣಗಳು ತಮ್ಮ ವೇದಿಕೆಯಲ್ಲಿರುವ ಮಕ್ಕಳ ದೌರ್ಜನ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಸಂಪೂರ್ಣವಾಗಿ ತೆಗೆದುಹಾಬೇಕು ಮತ್ತು ಭವಿಷ್ಯದಲ್ಲಿ ಇದಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.