ಸಿದ್ದು ಸರ್ಕಾರದ ರಿಮೋಟ್‌ ಯತೀಂದ್ರ ಕೈಲಿ: ರಾಜೀವ್‌ ಚಂದ್ರಶೇಖರ್ ವ್ಯಂಗ್ಯ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು, ಅಧಿಕಾರಿಗಳ ವರ್ಗಾವಣೆ ಕುರಿತಂತೆ ಮಾತನಾಡುತ್ತಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಸರ್ಕಾರದ ರಿಮೋಟ್‌ ಅವರ ಮಗ ಯತೀಂದ್ರ ಅವರ ಕೈಲಿದೆ’ ಎಂದು ಕೇಂದ್ರ ಸಚಿವ ಹಾಗೂ ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.

Union Minister Rajeev Chandrasekhar Slams on Siddaramaiah Congress Govt gvd

ನವದೆಹಲಿ (ನ.17): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು, ಅಧಿಕಾರಿಗಳ ವರ್ಗಾವಣೆ ಕುರಿತಂತೆ ಮಾತನಾಡುತ್ತಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಸರ್ಕಾರದ ರಿಮೋಟ್‌ ಅವರ ಮಗ ಯತೀಂದ್ರ ಅವರ ಕೈಲಿದೆ’ ಎಂದು ಕೇಂದ್ರ ಸಚಿವ ಹಾಗೂ ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.

ಗುರುವಾರ ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಕಾಂಗ್ರೆಸ್‌ನ ಯುಪಿಎ ಸರ್ಕಾರದ ಅವಧಿಯಲ್ಲಿ ರಿಮೋಟ್ ಕಂಟ್ರೋಲ್ ಸೋನಿಯಾ ಗಾಂಧಿ ಮತ್ತವರ ಮಗ ರಾಹುಲ್ ಗಾಂಧಿಯವರ ಕೈಯಲ್ಲಿತ್ತು. ಹಾಗಾಗಿ ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ನ ರಿಮೋಟ್ ಕಂಟ್ರೋಲ್ ಸಿದ್ದರಾಮಯ್ಯನವರ ಮಗನ ಕೈಯಲ್ಲಿದೆ’ ಎಂದು ಅವರು ಕುಟುಕಿದ್ದಾರೆ.

5 ವರ್ಷದಲ್ಲಿ 3000 ಕರ್ನಾಟಕ ಪಬ್ಲಿಕ್‌ ಶಾಲೆ ಶುರು: ಸಚಿವ ಮಧು ಬಂಗಾರಪ್ಪ

ಯತೀಂದ್ರ ವಿಡಿಯೋ ಬಗ್ಗೆ ತನಿಖೆಗೆ ಬಿಜೆಪಿ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಬಂಧ ತನಿಖೆ ನಡೆಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಶುಕ್ರವಾರ ನಗರದಲ್ಲಿ ಮಾಜಿ ಸಚಿವರಾದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಕೋಟ ಶ್ರೀನಿವಾಸ ಪೂಜಾರಿ ಪ್ರತ್ಯೇಕವಾಗಿ ಮಾತನಾಡಿ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಶೋಕ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಬಂದಾಗಿಲಿನಿಂದಲೂ ಮುಖ್ಯಮಂತ್ರಿ ಅಧಿಕಾರವನ್ನು ಚಲಾಯಿಸುತ್ತಿರುವುದು ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಎಂದರೆ ಈ ರೀತಿಯ ದಂಧೆಯ ಮಾಡುವುದಲ್ಲಿ ಪರಿಣಿತಿ ಪಡೆದುಕೊಂಡಿದೆ. ವಿಡಿಯೋ ಬಗ್ಗೆ ತನಿಖೆಯಾಗಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು. ಆಶ್ವತ್ಥನಾರಾಯಣ ಮಾತನಾಡಿ, ಯತೀಂದ್ರ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ವೈರಲ್ ಆಗಿರುವ ವಿಡಿಯೋ ನಿದರ್ಶನವಾಗಿದ್ದು, ಕೂಡಲೇ ಯತೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. 

BBMPಯಿಂದ ನಗರದಲ್ಲಿ ಪ್ರಾಣಿ-ಪಕ್ಷಿಗಳ ಸಮೀಕ್ಷೆ: ಇದರಿಂದ ಪ್ರಯೋಜನವೇನು ಗೊತ್ತಾ?

ಚುನಾಯಿತ ಪ್ರತಿನಿಧಿ ಅಲ್ಲದವರ ಎಟಿಎಂ ಸರ್ಕಾರ ಆಗಿದೆ. ತಂದೆಯ ಹೆಸರಲ್ಲಿ ಅಧಿಕಾರ ದುರ್ಬಳಕೆಯಾಗುತ್ತಿದೆ. ಕಾನೂನಿನ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಈಗ ಏನು ಹೇಳುತ್ತಾರೆ. ಈ ಸಂಬಂಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಭ್ರಷ್ಟಾಚಾರ ಪ್ರಕರಣಗಳ ತನಿಖೆಗಾಗಿ ನ್ಯಾ.ನಾಗಮೋಹನ್‌ ದಾಸ್‌ ಸಮಿತಿ ನೇಮಕ ಮಾಡಲಾಗಿದ್ದು, ಯತೀಂದ್ರ ವಿಡಿಯೋ ಕುರಿತು ತನಿಖೆಯೂ ಅದೇ ಸಮಿತಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Latest Videos
Follow Us:
Download App:
  • android
  • ios