ಅಭ್ಯರ್ಥಿಗಳ ಪಟ್ಟಿಯು ಮುಂದಿನ 5 ವರ್ಷಗಳ ಕಾಲ ಕರ್ನಾಟಕದ ಜನರಿಗೆ ಸೇವೆ ಸಲ್ಲಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ: ರಾಜೀವ್‌ ಚಂದ್ರಶೇಖರ್‌ 

ನವದೆಹಲಿ(ಏ.12): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಡುಗಡೆ ಮಾಡಲಾದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯು, ಡಬಲ್‌ ಎಂಜಿನ್‌ ಸರ್ಕಾರದ ‘ನವ ಕರ್ನಾಟಕ’ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ‘ನವ ಭಾರತ’ ಸೃಷ್ಟಿಯ ಕನಸನ್ನು ನನಸು ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ, ಕೌಶಲ್ಯ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಬಣ್ಣಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯು ಮುಂದಿನ 5 ವರ್ಷಗಳ ಕಾಲ ಕರ್ನಾಟಕದ ಜನರಿಗೆ ಸೇವೆ ಸಲ್ಲಿಸಲು ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ ಅಂತ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ. 

ಈ ಚುನಾವಣೆ ನನಗೆ ಪ್ರತಿಷ್ಠೆಯಲ್ಲ : ಬಿ. ಹರ್ಷವರ್ಧನ್‌

ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಸ್ಥಾನ ಕಲ್ಪಿಸಲಾಗಿದೆ. ಜೊತೆಗೆ ಒಬಿಸಿ ಸಮುದಾಯದ 32, ಎಸ್‌ಸಿ ಸಮುದಾಯದ 30, ಎಸ್ಟಿಸಮುದಾಯದ 16 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ 9 ವೈದ್ಯರು, 31 ಸ್ನಾತಕೋತ್ತರ ಪದವೀಧರರು, 8 ಮಹಿಳೆಯರು, ನಿವೃತ್ತ ಐಎಎಸ್‌, ಐಪಿಎಸ್‌ ಅಧಿಕಾರಿಗಳು ಕೂಡಾ ಸೇರಿದ್ದಾರೆ. ಇದಕ್ಕೆ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಮತ್ತು ಬಿ.ಎಲ್‌.ಸಂತೋಷ್‌ ಅವರ ಅದ್ಭುತ ನಿರ್ಧಾರ ಕಾರಣ ಎಂದು ರಾಜೀವ್‌ ಚಂದ್ರಶೇಖರ್‌ ಬಣ್ಣಿಸಿದ್ದಾರೆ.