ಬಿಟ್ಟಿ ಯೋಜನೆಗೆ ಹಣಕಾಸನ್ನು ಹೇಗೆ ಹೊಂದಿಸ್ತೀರಿ?: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಬಿಟ್ಟಿಯೋಜನೆಗೆ ಹಣಕಾಸನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ ಎಂಬುದನ್ನ ಜನರಿಗೆ ತಿಳಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ತೆರಿಗೆ ವಿಧಿಸುತ್ತೀರಾ? ಸಾಲ ಮಾಡುತ್ತೀರಾ ಮೊದಲು ತಿಳಿಸಿ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು.
ಮೈಸೂರು (ಜೂ.14): ಬಿಟ್ಟಿ ಯೋಜನೆಗೆ ಹಣಕಾಸನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ ಎಂಬುದನ್ನ ಜನರಿಗೆ ತಿಳಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ತೆರಿಗೆ ವಿಧಿಸುತ್ತೀರಾ? ಸಾಲ ಮಾಡುತ್ತೀರಾ ಮೊದಲು ತಿಳಿಸಿ ಎಂದು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಹಣಕಾಸಿನ ಸ್ಥಿತಿ ಹೇಗಿದೆ? ಒಟ್ಟು ಎಷ್ಟು ಸಾಲದಲ್ಲಿ ನಮ್ಮ ರಾಜ್ಯ ಇದೆ? ಪ್ರತಿ ವರ್ಷ ಇದಕ್ಕೆ ಎಷ್ಟುಬಡ್ಡಿ ಕಟ್ಟಬೇಕು. ಇದನ್ನು ಮೊದಲು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಬಹಳ ಧೈರ್ಯದ ಮೇಲೆ ಯಾವುದೇ ಕಂಡೀಷನ್ ಇಲ್ಲದೆ ಗ್ಯಾರಂಟಿ ಬಗ್ಗೆ ಹೇಳಿತ್ತು.
ಇಂದು ಕಂಡಿಷನ್ ಆಧಾರದ ಮೇಲೆ ಕೊಡುವ ಯೋಚನೆ ಮಾಡುತ್ತಿದೆ. ಕರ್ನಾಟಕದಲ್ಲಿ ಎಲ್ಲಾ ಮನೆಗಳಿಗೆ ವಿದ್ಯುತ್ ಬಿಲ್ ಬಂದಿದೆ. ಒಂದು ಕಡೆ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತು ಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು. ರಾಜ್ಯದಲ್ಲಿ ಮಹಿಳೆಯರು ಬಹಳ ಖುಷಿಯಿಂದ ಬಸ್‌ನಲ್ಲಿ ಓಡಾಡುತ್ತಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿಗೆ ಆಗುವ ನಷ್ಟವನ್ನ ಹೇಗೆ ಭರಿಸಲಾಗುತ್ತೆ ಎಂಬುದನ್ನ ತಿಳಿಸಬೇಕು. ಎಲ್ಲವನ್ನು ಕೇಂದ್ರ ಸರ್ಕಾರದ ಮೇಲೆ ಹಾಕಿ ಕೈ ತೊಳೆದುಕೊಳ್ಳುವ ಆಲೋಚನೆಯಲ್ಲಿ ಇದ್ರೆ ಅದಕ್ಕೆ ಜನರು ಉತ್ತರಿಸುತ್ತಾರೆ ಎಂದು ಅವರು ತಿಳಿಸಿದರು.
ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವಷ್ಟು ನೆರವು ನೀಡಲು ನಮ್ಮ ಸರ್ಕಾರ ಬದ್ಧ: ಸಚಿವ ಮಹದೇವಪ್ಪ
ದೇಶದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ದೇಶದಲ್ಲಿ ಮಾನ್ಸೂನ್ ಬೇಗ ಆರಂಭ ಆಗಬೇಕಿತ್ತು, ತಡವಾಗಿದೆ. ಆದರೂ ರೈತರು ಬಿತ್ತನೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ದೇಶದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮಾನ್ಸೂನ್ ತಡವಾಗಿ ಆರಂಭವಾದರೂ ಬಿತ್ತನೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಬಿ, ಖಾರಿಫ್ ಬೆಳೆಗೆ ಸಂಬಂಧಿಸಿದಂತೆ ಕೇಂದ್ರದ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಭೆ ಮಾಡಿದೆ. ಯಾವ ರಾಜ್ಯಕ್ಕೆ ಯಾವ ಬಿತ್ತನೆ ಬೀಜ, ರಸಗೊಬ್ಬರ ಬೇಕು ಎಂಬ ಮಾಹಿತಿ ಪಡೆದು ಅದನ್ನು ಪೂರೈಸುವ ಕೆಲಸ ಮಾಡುತ್ತಿದೆ ಎಂದರು. ಈ ಬಾರಿಯೂ ಮುಂಗಾರಿಗೂ ಮೊದಲು ಎಲ್ಲ ರಾಜ್ಯಗಳ ಕೃಷಿ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು, ಸಭೆ ನಡೆಸಿ ಆಯಾ ರಾಜ್ಯಕ್ಕೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಾರ್ವಜನಿಕ ಉದ್ದಿಮೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಭರ್ತಿ: ಸಾರ್ವಜನಿಕ ಉದ್ದಿಮೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಭರ್ತಿ ಆಗುತ್ತಿದ್ದು, ಮುಂದಿನ ವರ್ಷದ ವೇಳೆಗೆ 10 ಲಕ್ಷ ಮಂದಿಗೆ ಸರ್ಕಾರಿ ನೌಕರಿ ನೀಡುವುದು ಗುರಿಯಾಗಿದೆ. ಈಗಾಗಲೇ 3.59 ಲಕ್ಷ ಉದ್ಯೋಗ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ (ಆಯಿಷ್) ಆಯೋಜಿಸಿದ್ದ ಮಿಷನ್ ನೇಮಕಾತಿ 6ನೇ ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಅವರು ಮೈಸೂರು ವಿಭಾಗದಲ್ಲಿ ನೇಮಕಗೊಂಡ ಅಭ್ಯರ್ಥಿಗಳಿಗೆ ಪತ್ರವನ್ನು ವಿತರಿಸಿ ಮಾತನಾಡಿದರು.
ಸರ್ಕಾರಿ ಕ್ಷೇತ್ರವಲ್ಲದೆ ಖಾಸಗಿ ವಲಯದಲ್ಲೂ ಪ್ರಗತಿಯಾಗಿದೆ. ದೇಶದಲ್ಲಿ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ನವೋದ್ಯಮಗಳು ಸ್ಥಾಪನೆಯಾಗಿದ್ದು, ಉದ್ಯೋಗದ ಜೊತೆಗೆ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಪರಂಪರಾಗತ ಗುಡಿ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸಾಲ ಸೌಲಭ್ಯದ ಜೊತೆಗೆ ತಂತ್ರಜ್ಞಾನ ಸಹಕಾರವನ್ನು ನೀಡುತ್ತಿದೆ ಎಂದು ಅವರು ಹೇಳಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಕೇವಲ ವದಂತಿ: ಎಚ್.ಡಿ.ಕುಮಾರಸ್ವಾಮಿ
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಅಗತ್ಯ ನೇಮಕಾತಿ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿದೆ. ಪ್ರಧಾನಿಯವರೇ ಶಿಲಾನ್ಯಾಸ ಮಾಡಿ ಅವರೇ ಉದ್ಘಾಟಿಸುತ್ತಿರುವುದನ್ನು ಹಿಂದೆಂದೂ ನೋಡಿರಲಿಲ್ಲ. ಅದು ಅಭಿವೃದ್ಧಿಯ ಬಗ್ಗೆ ಪ್ರಧಾನಿ ಹಾಗೂ ಸರ್ಕಾರಕ್ಕಿರುವ ಬದ್ಧತೆ. ಸ್ವಾತಂತ್ರ್ಯದ ಶತಮಾನೋತ್ಸವ ಸಂದರ್ಭದಲ್ಲಿ ಜಾಗತಿಕ ಅಭಿವೃದ್ಧಿ ದೇಶಗಳಲ್ಲಿ ಭಾರತವು 2ನೇ ಸ್ಥಾನದಲ್ಲಿರಬೇಕು ಎಂಬುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು.