ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ. ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಬೆಂಗಳೂರು (ಜೂ.14): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ. ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿರುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಎಂದೂ ಬರದಿದ್ದ ಪ್ರಕರಣಗಳು ಈಗ ಯಾಕೆ ಬರ್ತಿವೆ? ಇದರಲ್ಲಿ ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಪಾತ್ರ ಇದೆಯಾ? ಇದರ ಬಗ್ಗೆ ಗೊತ್ತಿಲ್ಲ. ಆದರೆ ನ್ಯಾಯಾಲಯ ಖಂಡಿತವಾಗಿ ನೆಲದ ಕಾನೂನು ಎತ್ತಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಈ ಆರೋಪ ಯಾಕೆ ಬಂತು ಅಂತ ಜನ ಗಮನಿಸ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸ್ತಿದ್ದಾರೆ, ಕಾದು ನೋಡೋಣ ಎಂದರು.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ರಾ ದರ್ಶನ್? ಸಿಪಿವೈ ಸ್ಫೋಟಕ ಹೇಳಿಕೆ
ಇನ್ನು ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ನಿರಂತರ ಕೊಲೆ, ಅತ್ಯಾಚಾರಗಳು ನಡೀತಿವೆ. ಸರ್ಕಾರ ಕೊಲೆಗಡುಕರ ಪರವಾಗಿ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಕಾನೂನು, ಪೊಲೀಸರ ಭಯ ಇಲ್ಲದಂತಾಗಿದೆ. ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಪ್ರಚಾರ ಮಾಡಿದ್ರು ಅಂತಾ ಶಾಮಿಯಾನ ಹಾಕಿ ರಕ್ಷಣೆ ಮಾಡ್ತಿದ್ದಾರಾ? ಆರೋಪಿಗಳು ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನ, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು, ಉಳಿದವರಿಗೊಂದು ಕಾನೂನು ಅನ್ನುವ ಸಂದೇಶ ಸರ್ಕಾರ ನೀಡಿದೆ. ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ, ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನಿನಂತೆ ಶಿಕ್ಷೆ ಆಗಲಿ, ಕಾನೂನಿನಂತೆ ತನಿಖೆ ಆಗಲಿ. ಯಾರು ಕೊಲೆಗಡುಕರಿದ್ದಾರೋ ಅವರ ರಕ್ಷಣೆಯನ್ನು ಸರ್ಕಾರ ಆಗಲೀ ಪೊಲೀಸರಾಗಲೀ ಮಾಡಬಾರದು ಎಂದು ಆಗ್ರಹಿಸಿದರು.