ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸ ಮಾಡಿದೆ. ಆದರೆ, ನನ್ನ ವಿರುದ್ಧ ಕೆಲವು ಟಿಕೆಟ್ ಆಕಾಂಕ್ಷಿಗಳು ಕೆಲಸ ಮಾಡಿದರು. ಅಭಿಯಾನ ನಡೆಸಿದರು. ಆದರೆ, ಅವರಿಗೂ ಟಿಕೆಟ್ ತರಲು ಆಗಲಿಲ್ಲ. ಈಗ ನನಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೊಟ್ಟಿದ್ದಾರೆ. ಇಲ್ಲಿನ ಮುಖಂಡರ ಬೆಂಬಲದೊಂದಿಗೆ ಪ್ರಚಾರ ಮಾಡುವೆ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು(ಮಾ.15): ನನ್ನ ವಿರುದ್ಧ ಪ್ರಯತ್ನ ನಡೆಸಿದವರಿಗೆ ತಮಗೂ ಟಿಕೆಟ್ ತರಲು ಸಾಧ್ಯವಾಗಲಿಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪರೋಕ್ಷವಾಗಿ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರ ನಿವಾಸಕ್ಕೆ ತೆರಳಿ ಕಾಲು ಮುಟ್ಟಿ ನಮಸ್ಕರಿಸುವ ಮೂಲಕ ಆಶೀರ್ವಾದ ಪಡೆದರು.

2045ಕ್ಕೆ ಭಾರತ ವಿಶ್ವದ ನಂ.1 ರಾಷ್ಟ್ರದ ಗುರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸ ಮಾಡಿದೆ. ಆದರೆ, ನನ್ನ ವಿರುದ್ಧ ಕೆಲವು ಟಿಕೆಟ್ ಆಕಾಂಕ್ಷಿಗಳು ಕೆಲಸ ಮಾಡಿದರು. ಅಭಿಯಾನ ನಡೆಸಿದರು. ಆದರೆ, ಅವರಿಗೂ ಟಿಕೆಟ್ ತರಲು ಆಗಲಿಲ್ಲ. ಈಗ ನನಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಕೊಟ್ಟಿದ್ದಾರೆ. ಇಲ್ಲಿನ ಮುಖಂಡರ ಬೆಂಬಲದೊಂದಿಗೆ ಪ್ರಚಾರ ಮಾಡುವೆ ಎಂದರು.