ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ರಚನಾತ್ಮಕ ಕೆಲಸ ಮಾಡುತ್ತೇವೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಹಜ. ಸೋಲನ್ನು ಸ್ವೀಕರಿಸಿದ್ದೇವೆ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಹೊಸ ಸರ್ಕಾರ ಈಡೇರಿಸಲಿ ಎಂದು ಕೋರುವುದಾಗಿ ಹೇಳಿದ ಶೋಭಾ ಕರಂದ್ಲಾಜೆ 

Union Minister Shobha Karandlaje Talks Over BJP Defeated in Karnataka Election 2023 grg

ಮೈಸೂರು(ಮೇ.17):  ವಿಧಾನಸಭಾ ಚುನಾವಣೆಯ ಸೋಲನ್ನು ನಾವು ಸ್ವೀಕರಿಸಿದ್ದು, ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಹಜ. ಸೋಲನ್ನು ಸ್ವೀಕರಿಸಿದ್ದೇವೆ. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ಜನರಿಗೆ ನೀಡಿರುವ ಭರವಸೆಯನ್ನು ಹೊಸ ಸರ್ಕಾರ ಈಡೇರಿಸಲಿ ಎಂದು ಕೋರುವುದಾಗಿ ಹೇಳಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿ ಗ್ರಾಮದ ಶೇ.90ರಷ್ಟು ಮಂದಿಗೆ ಸವಲತ್ತು ಒದಗಿಸಿದೆ. ಆದರೆ, ಬೇರೆ, ಬೇರೆ ಕಾರಣಕ್ಕಾಗಿ ಸೋಲುಂಟಾಗಿದೆ ಎಂದು ಅವರು ಹೇಳಿದರು.

ಸುರ್ಜೆವಾಲಾಗೆ ಹನುಮನ ತಂದೆ-ತಾಯಿ ಯಾರು ಗೊತ್ತಿಲ್ಲ: ಶೋಭಾ ಕರಂದ್ಲಾಜೆ ಕಿಡಿ

ಮುಂಗಾರು ಮಳೆ ಹಿನ್ನೆಲೆಯಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಮುಂತಾದವುಗಳ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಯಾವುದೇ ರಾಜ್ಯ ಸಲ್ಲಿಸುವ ಬೇಡಿಕೆಗೆ ತಕ್ಕಂತೆ ಸರಬರಾಜು ಮಾಡಲಾಗುವುದು ಎಂದು ಅವರು ಹೇಳಿದರು.

Latest Videos
Follow Us:
Download App:
  • android
  • ios