ಬಿಜೆಪಿ ಹಾಗೂ ಮಾಧ್ಯಮಗಳು ಜನತೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅನವಸರ ಗೊಂದಲ ಸೃಷ್ಟಿಸುತ್ತಿವೆ ಎಂದು ಬೆಂಗಳೂರು ಗ್ರಾಮಾಂತರ ಸಂಸತ್‌ ಸದಸ್ಯ ಡಿ.ಕೆ.ಸುರೇಶ್‌ ಹೇಳಿದರು. 

ಕುಣಿಗಲ್‌ (ಜೂ.02): ಬಿಜೆಪಿ ಹಾಗೂ ಮಾಧ್ಯಮಗಳು ಜನತೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅನವಸರ ಗೊಂದಲ ಸೃಷ್ಟಿಸುತ್ತಿವೆ ಎಂದು ಬೆಂಗಳೂರು ಗ್ರಾಮಾಂತರ ಸಂಸತ್‌ ಸದಸ್ಯ ಡಿ.ಕೆ.ಸುರೇಶ್‌ ಹೇಳಿದರು. ತಾಲೂಕಿನ ಕಸಬಾ ಹೋಬಳಿ ಗಿರಿ ಗೌಡನ ಪಾಳ್ಯ ಗೇಟಿನಲ್ಲಿ ಕಾಂಗ್ರೆಸ್‌ ಶಾಸಕ ಎಚ್‌.ಡಿ.ರಂಗನಾಥ್‌ ಎರಡನೇ ಬಾರಿ ಬಹುಮತದಿಂದ ಆಯ್ಕೆಗೊಂಡ ಹಿನ್ನಲೆಯಲ್ಲಿ ಅಭಿನಂದನಾ ಸಮಾರಂಭ ಕಾಂಗ್ರೆಸ್‌ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯದ ಜನರು ಕಾಂಗ್ರೆಸ್‌ ಪರವಾಗಿ ಮತ ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಈಗಾಗಲೇ ಈ ಯೋಜನೆಗಳ ಬಗ್ಗೆ ರೂಪರೇಷೆಗಳನ್ನು ಪಡೆಯುತ್ತಿದ್ದು, ಎಲ್ಲಾ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಕಾರ್ಯಕರ್ತರು, ಬಡವರು, ರೈತರು, ದುರ್ಬಲ ವರ್ಗದ ಜನರಿಗೆ ಈ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಂತಹ ಕಾರ್ಯ ಕೈಗೊಳ್ಳಬೇಕೆಂದರು. ಕುಣಿಗಲ್‌ ಕ್ಷೇತ್ರವನ್ನು ತುಮಕೂರು ಜಿಲ್ಲೆಯಲ್ಲಿ ಮಾದರಿ ತಾಲೂಕಾಗಿ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಹೆರಿಗೆ ಹಾಗೂ ಮಕ್ಕಳ ನೂರು ಹಾಸಿಗೆ ಉಳ್ಳ ಆಸ್ಪತ್ರೆಯನ್ನು ಕೆಲವೇ ದಿನಗಳಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ದೇವನಹಳ್ಳಿ-ವಿಜಯಪುರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಮುನಿಯಪ್ಪ

ಶಾಸಕ ಡಾ.ಎಚ್‌.ಡಿ.ರಂಗನಾಥ ಮಾತನಾಡಿ, ತಾಲೂಕಿನ ಎಲ್ಲಾ ಕೆರೆಕಟ್ಟೆಗಳನ್ನು ತುಂಬಿಸಲಾಗುವುದು. ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆಯನ್ನು ಈ ವರ್ಷವೇ ಅನುಷ್ಠಾನಗೊಳಿಸಲಾಗುವುದು. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಯನ್ನು ಮಾದರಿ ತಾಲೂಕಾಗಿ ನಿರ್ಮಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರ ಪತ್ನಿ ಸುಮಾ ರಂಗನಾಥ್‌, ಇಪ್ಪಡಿ ವಿಶ್ವನಾಥ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರುದ್ರಪ್ಪ, ಆಡಿಟರ್‌ ನಾಗರಾಜು, ಗಂಗಶಾನಯ್ಯ, ಬಿ.ಕೆ.ರಾಮಣ್ಣ, ವೆಂಕಟರಾಮ್‌, ಬೇಗೂರು ನಾರಾಯಣ, ಭೋಜಯ್ಯ, ಮಾಗಡಯ್ಯ ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಮಕ್ಕಳ ದಾಖ​ಲಾ​ತಿಗೆ ವಾಮ​ಮಾರ್ಗ ಹಿಡಿದ ಪೋಷ​ಕರು: ಎಲ್‌ಕೆಜಿಗೆ 4 ವರ್ಷ, ಯುಕೆಜಿಗೆ 5 ವರ್ಷ

ಕಾರ್ಯಕರ್ತರಿಗೆ, ಮುಖಂಡರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು. ಕಾಂಗ್ರೆಸ್‌ ಪಕ್ಷವು ನುಡಿದಂತೆ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಸರ್ಕಾರದ ಅನುದಾನದ ಸೌಲಭ್ಯಗಳು ಮತದಾರರಿಗೆ ನೇರವಾಗಿ ತಲುಪಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡವೋ ಎಂದು ಆಲೋಚನೆಯಲ್ಲಿ ಇದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ತಿಳಿಸಲಾಗುವುದು.
-ಡಿ.ಕೆ. ಸುರೇಶ್‌, ಸಂಸದ