ಲೋಕಸಭಾ ಚುನಾವಣೆ 2024: ಪಂಚಮಸಾಲಿಗೆ ನ್ಯಾಯ ಸಿಗದಿದ್ದರೆ ಸೂಕ್ತ ಉತ್ತರ, ವಚನಾನಂದ ಶ್ರೀ ಎಚ್ಚರಿಕೆ
ಹಿಂದೆಯೇ ಬಿಜೆಪಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ, ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಟಿಕೆಟ್ ಕೋರಲಾಗಿತ್ತು. ಆದರೂ ನಮ್ಮ ಕೋರಿಕೆಗೆ ಮನ್ನಣೆ ನೀಡಿಲ್ಲ. ಕಾಂಗ್ರೆಸ್ 2, ಬಿಜೆಪಿ 1 ಕ್ಷೇತ್ರದಲ್ಲಿ ಮಾತ್ರ ಸಮುದಾಯದವರಿಗೆ ಮನ್ನಣೆ ನೀಡಿದೆ. ಈ ಮೂಲಕ ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹಾಗೂ 15 ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿರುವ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ
ಹರಿಹರ(ಮಾ.26): ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ದೊರಕದಿದ್ದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಾ ಗುವುದು ಎಂದು ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆಯೇ ಬಿಜೆಪಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ, ಟಿಕೆಟ್ ಹಂಚಿಕೆಯಲ್ಲಿ ಸಮುದಾಯಕ್ಕೆ ಟಿಕೆಟ್ ಕೋರಲಾಗಿತ್ತು. ಆದರೂ ನಮ್ಮ ಕೋರಿಕೆಗೆ ಮನ್ನಣೆ ನೀಡಿಲ್ಲ. ಕಾಂಗ್ರೆಸ್ 2, ಬಿಜೆಪಿ 1 ಕ್ಷೇತ್ರದಲ್ಲಿ ಮಾತ್ರ ಸಮುದಾಯದವರಿಗೆ ಮನ್ನಣೆ ನೀಡಿದೆ. ಈ ಮೂಲಕ ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹಾಗೂ 15 ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರಿರುವ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದರು.
ಲೋಕಸಭೆ ಚುನಾವಣೆ 2024: ಬಿಜೆಪಿ ಜತೆ ಮೈತ್ರಿ ಯಶಸ್ಸಿಗೆ ಜೆಡಿಎಸ್ ಅಷ್ಟಸೂತ್ರ..!
ನಮ್ಮ ಮತ ಬಿಜೆಪಿಗೆ ಎಂಬ ಭ್ರಮೆ ಬೇಡ, ನಮ್ಮ ಸಮುದಾಯವನ್ನು ವ್ಯವಸ್ಥಿತವಾಗಿ ಹತ್ತಿಕ್ಕುತ್ತಿರುವುದು ನೋಡಿಯೂ ನಾವು ಸುಮ್ಮನಿರಲ್ಲ, ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ, ಮುಖಂಡರೊಂದಿಗೆ ಚರ್ಚಿಸುತ್ತೇವೆ. ಮೊದಲ ವಾರದಲ್ಲಿ ಪ್ರಮುಖರ ಸಭೆ ನಡೆಸಿ ಅನ್ಯಾಯ ಮಾಡಿದವರಿಗೆ ಸೂಕ್ತ ಉತ್ತರ ನೀಡಲು ನಿರ್ಣಯಿಸುತ್ತೇವೆ ಎಂದರು.
ರಾಜ್ಯದ ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಕಲಬುರಗಿ, ಉತ್ತರ ಕನ್ನಡ, ಚಿಕ್ಕೋಡಿ ಸೇರಿ ಹಲವು ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಮತದಾರರೇ ನಿರ್ಣಾಯಕ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.