ಸದನದಲ್ಲಿ ವಾಲ್ಮೀಕಿ, ಮುಡಾ ಹಗರಣ ಪ್ರಸ್ತಾಪ: ಅಶೋಕ್‌

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಅಲ್ಲದೆ, ಜು.15 ನಡೆಯಲಿರುವ ಸದನ ವನ್ನು ಇನ್ನೂ 1 ವಾರ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದ ವಿಪಕ್ಷ ನಾಯಕ ಆರ್. ಅಶೋಕ್ 

valmiki muda scandal issues to be discussed in session says leader of the opposition r ashok grg

ಬೆಂಗಳೂರು(ಜು.11):  ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರೆಸಿದ್ದು, ವಿಧಾನ ಮಂಡಲದ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಬುಧವಾರ ಅಶೋಕ್ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಉಭಯ ಸದನಗಳ ಪಕ್ಷದ ನಾಯಕ ರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಅಲ್ಲದೆ, ಜು.15 ನಡೆಯಲಿರುವ ಸದನ ವನ್ನು ಇನ್ನೂ 1 ವಾರ ವಿಸ್ತ ರಣೆ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದರು. 

ಸಿದ್ದು ಪತ್ನಿಗೆ ಸಿಗಬೇಕಾಗಿದ್ದು ಎರಡೇ ಸೈಟ್‌, ಕೊಟ್ಟಿರುವುದು 14 ನಿವೇಶನ: ಬಿ.ವೈ.ವಿಜಯೇಂದ್ರ

ಝೀಕಾ ವೈರಸ್, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರೆ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆ ಯುತ್ತಿದೆ. 700 ಕೋಟಿ ರೂ. ಹಾಲು ಪ್ರೋತ್ಸಾ ಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡು ಬಂದಿದೆ.1 ವರ್ಷದಲ್ಲಿ ಕಾಂಗ್ರೆಸ್ ಶಿಶುಪಾ ಜನಂತೆ 100 ತಪ್ಪುಗಳನ್ನು ಮಾಡಿದೆ ಎಂದರು. ವಾಲ್ಮೀಕಿ ನಿಗಮದಲ್ಲಿ ಲೂಟಿ ಯಾದ 187 ಕೋಟಿ ರು. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು ಮನೆ ನಿರ್ಮಿಸಲು ಮೀಸ ಲಾಗಿತ್ತು. ಇದರ ವಿರುದ್ದವೂ ಹೋರಾಟ ನಡೆಸಲಾಗುವುದು ಎಂದರು.

ರಾಮನಗರ ಜಿಲ್ಲೆಯ ಹೆಸರು ತೆಗೆಯಲು ಕಾಂಗ್ರೆಸ್‌ಗೆ ಹಕ್ಕಿಲ್ಲ: 

ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ? ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು. ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ, ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ. ಆಯಾ ಜಿಲ್ಲೆಗೆ ಅದರದ್ದೇ ಘನತೆ ಇದೆ. ಹುಚ್ಚರಂತೆ, ತುಘಲಕ್‌ ರಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದೆಂದು ಎಚ್ಚರಿಸಿದರು.

Latest Videos
Follow Us:
Download App:
  • android
  • ios