Asianet Suvarna News Asianet Suvarna News

ನನಗೂ ಸ್ಥಾನಮಾನ ಬೇಕು: ಅಧಿಕಾರದ ಆಸೆ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ!

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆಗೆ (ಸಿದ್ದರಾಮಯ್ಯ) ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ನನಗೂ ಸ್ಥಾನಮಾನ ಬೇಕು ಎಂದು ಅಧಿಕಾರದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

Varuna Constituency Congress Ex MLA yathindra siddaramaiah Eye On Government Post gvd
Author
First Published Jul 5, 2023, 9:45 AM IST

ಮೈಸೂರು (ಜು.05): ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆಗೆ (ಸಿದ್ದರಾಮಯ್ಯ) ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ನನಗೂ ಸ್ಥಾನಮಾನ ಬೇಕು ಎಂದು ಅಧಿಕಾರದ ಆಸೆಯನ್ನು ಬಹಿರಂಗಪಡಿಸಿದ್ದಾರೆ. ಹೌದು! ವರುಣಾ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಯತೀಂದ್ರ ಸಿದ್ದರಾಮಯ್ಯ ಸಹ ಒಲವು ತೋರಿದ್ದಾರೆ. ವರುಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗದ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರು ನಿಭಾಯಿಸುತ್ತೇನೆ. ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನ ನೋಡಲು ಬರುವ ರಾಜ್ಯದ ಜನರನನ್ನೆಲ್ಲ ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಜನರ ಸಮಸ್ಯೆಯನ್ನ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು  ಚಿಕ್ಕದಾದ ಸ್ಥಾನಮಾನ ನೀಡಿದ್ರು ಸಹಕಾರಿ ಆಗುತ್ತೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ, ಆದರೂ ಅಂತದ್ದೆ ಸಣ್ಣ ಹುದ್ದೆ ನೀಡಿದ್ರು ಜನರ ಸೇವೆ ಮಾಡಲು ನಾನು ಸಿದ್ದನಿದ್ದೇನೆ. ಎಂದು ಯತಿಂದ್ರ ಸಿದ್ದರಾಮಯ್ಯ ತಿಳಿಸಿದರು.

'ಭಾಗ್ಯದ ಲಕ್ಷ್ಮೀ ಬಾರಮ್ಮ' ಹಾಡನ್ನು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದ ಡಿಕೆಶಿ

ಯತೀಂದ್ರರನ್ನು ಸಂಪುಟಕ್ಕೆ ಸೇರಿಸಿ: ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ತು ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಕೆ. ಹರೀಶ್‌ಗೌಡ ಮನವಿ ಮಾಡಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ಸ್ನೇಹ ಬಳಗದ ವತಿಯಿಂದ ಶನಿವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮೈಸೂರಿನ ಅಭಿವೃದ್ಧಿಗೆ ಸಮರ್ಥ ನಾಯಕತ್ವದ ಅಗತ್ಯವಿದೆ. ಡಾ. ಯತೀಂದ್ರ ಅವರಲ್ಲಿ ಆ ಸಾಮರ್ಥ್ಯವಿದ್ದು, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದರು. ಚಾಮರಾಜ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಮತದಾರರು ಎಷ್ಟುಸಹಕಾರ ನೀಡಿದ್ದಾರೋ ಅಷ್ಟೇ ಸಹಕಾರವನ್ನು ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ್ದಾರೆ. 

ಇನ್ಮುಂದೆ ಐತಿಹಾಸಿಕ ಹಂಪಿಯ ಕಲ್ಲಿನ ತೇರಿನ ಮುಂದೆ ಸೆಲ್ಫಿ‌ ಕ್ಲಿಕ್ಕಿಸಲು ಆಗಲ್ಲ: ಕಾರಣವೇನು ಗೊತ್ತಾ?

ಅವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಜನಪರ ಸೇವೆಯ ಆಕಾಂಕ್ಷೆಗೆ ಭರವಸೆಯಾಗಿದ್ದರು ಎಂದು ಅವರು ತಿಳಿಸಿದರು.ಪ್ರಗತಿಪರ ಚಿಂತಕ ಡಾ.ಕೆ. ಕಾಳಚನ್ನೇಗೌಡ ಮಾತನಾಡಿ, ಶಾಸಕ ಕೆ. ಹರೀಶ್‌ಗೌಡ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನ ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಯನ್ನು ಸುಧಾರಿಸಲು ಕ್ರಮ ವಹಿಸಬೇಕು. ಪ್ರತಿ ಶಾಸಕರು ತಮ್ಮ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ತಿಂಗಳಿಗೊಮ್ಮೆ ಭೇಟಿ ನೀಡಿ ವ್ಯವಸ್ಥೆಗಳ ಸುಧಾರಣೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಮೈಸೂರು ವಿವಿ ಮತ್ತು ನಗರದ ಸರ್ಕಾರಿ ಶಾಲಾ ಕಾಲೇಜುಗಳು ಉಪನ್ಯಾಸಕರ ಕೊರತೆಯನ್ನು ಎದುರಿಸುತ್ತಿವೆ. ಅತಿಥಿ ಉಪನ್ಯಾಸಕರ ನೇಮಕಾತಿ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ತಡವಾಗಿ ಪ್ರವೇಶಾತಿ ಕೈಗೊಳ್ಳುವುದು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಶೈಕ್ಷಣಿಕ ಸಂಸ್ಥೆಗಳ ಪ್ರಗತಿಗೆ ಮಾರಕವಾಗಿ ಪರಿಣಮಿಸಿದೆ. ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದರು.

Follow Us:
Download App:
  • android
  • ios