ಮುನ್ನೆಲೆಗೆ ಬಂದ ಮೂಲ ಕಾಂಗ್ರೆಸ್‌ ಮತ್ತು ವಲಸಿಗ ಕಾಂಗ್ರೆಸ್ಸಿಗರ ಫೈಟ್‌ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲಯಾರೊಬ್ಬರೂ ಎರಡು ಕ್ಷೇತ್ರಗಳಿಗೆ ಕೈ ಟಿಕೆಟ್ ಆಕಾಂಕ್ಷಿಗಳಲ್ಲ

ಮೈಸೂರು (ಫೆ.04): ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಟಿಕೆಟ್‌ಗೆ ಅರ್ಜಿ ಸಲ್ಲಿಕೆ ಜೊತೆಗೆ ಕಚೇರಿ ನಿರ್ಮಾಣಕ್ಕೆಂದು ತಲಾ ೨ ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಹೀಗಾಗಿ, ಟಿಕೆಟ್‌ಗೆ ಭರ್ಜರಿ ಪೈಪೋಟಿ ಶುರುವಾಗಿದೆ. ಇದರ ನಡುವೆಯೇ ಸಿದ್ದರಾಮಯ್ಯ ಬಣಕ್ಕೆ ಠಕ್ಕರ್‌ ಕೊಟ್ಟಿರುವ ವೀರಪ್ಪ ಮೊಯ್ಲಿ ಅವರು ತಮ್ಮ ಆಪ್ತ ವಾಸು ಅವರಿಗೆ ಚಾಮರಾಜ ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ಗಳನ್ನು ಸಂಕ್ರಾತಿಯ ನಂತರ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದರು. ನಂತರ ಜನವರಿ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದರೂ ಈವರೆಗೆ ಪಟ್ಟಿ ಹೊರಬಂದಿಲ್ಲ. ಅದರ ನಡುವೆಯೇ ಕಾಂಗ್ರೆಸ್‌ನಲ್ಲಿ ಮುಂದುವರಿಗೆ ಟಿಕೆಟ್ ಘೋಷಣೆ ಪ್ರಹಸನ ಮುಂದುವರೆದಿದೆ. ಇತ್ತೀಚೆಗೆ ಮಾಜಿ ಸಚಿವ ಬಿ.ಝಡ್‌. ಜಮೀರ್‌ ಅಹಮದ್‌ ಖಾನ್‌ ತಮ್ಮ ಆಪ್ತರಿಗೆ ಟಿಕೆಟ್‌ ಘೋಷಣೆ ಮಾಡಿದ್ದರು. ಈಗ ಅದರ ನಡುವೆಯೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ತಮ್ಮ ಆಪ್ತ ವಾಸು ಅವರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಅನ್ನು ಘೋಷಣೆ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಇರಿಸು- ಮುರಿಸು ಉಂಟಾಗಿದೆ.

ಕೋಲಾರ ಕಾಂಗ್ರೆಸ್'ನಲ್ಲಿ ಬಣ ಬಡಿದಾಟ: ವೀರಪ್ಪ ಮೊಯ್ಲಿ ಮುಂದೆ ಹೈಡ್ರಾಮಾ

ಮೂಲ ಕಾಂಗ್ರೆಸ್‌ ಹಿತ ಕಾಯುವುದೇ ನನ್ನ ಕೆಲಸ: ಈ ಕುರಿತು ಮಾತನಾಡಿರುವ ವೀರಪ್ಪ ಮೊಯ್ಲಿ ಅವರು, ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ. ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು ಆಗಿದ್ದೇವೆ. ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ಮಾಜಿ ಶಾಸಕ ವಾಸುಗೆ ಟಿಕೆಟ್ ಖಚಿತವಾಗಿದೆ. ವಾಸು ಅವರಿಗೆ ಚಾಮರಾಜ ಕ್ಷೇತ್ರದ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ವಾಸು ಬಲಿಷ್ಟವಾದ ಅಭ್ಯರ್ಥಿ. ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತದೆ. ಸಿದ್ದರಾಮಯ್ಯ ಬಣ ಇಲ್ಲ, ಇದು ಕಾಂಗ್ರೆಸ್ ಬಣ. ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ ಎಂದು ಮಾಜಿ ಸಿಎಂ ಮೊಯ್ಲಿ ಟಿಕೆಟ್ ಘೋಷಣೆ ಮಾಡಿದ್ದಾರೆ. 

ರಾಜ್ಯದಲ್ಲಿ ಸಾಕಷ್ಟು ಸಿಡಿಗಳಿವೆ: ರಮೇಶ್‌ ಜಾರಕಿಹೊಳಿ ಅವರ ಸಿಡಿ‌ ಪ್ರಕರಣದ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮರ್ಥವಾಗಿ ಉತ್ತರ ಕೊಟ್ಟಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಿಡಿಗಳಿವೆ‌. ಚುನಾವಣೆ ಸಂದರ್ಭದಲ್ಲಿ ಇಂತಹ ಸಿಡಿಗಳು ಸಾಕಷ್ಟು ಹೊರಗೆ ಬರುತ್ತವೆ. ಸಿಡಿ ವಿಚಾರ ಇಟ್ಟುಕೊಂಡು ಡಿಕೆಶಿ ಬ್ಲಾಕ್‌ಮೇಲ್ ಮಾಡುವುದಿಲ್ಲ. ಬಿಜೆಪಿ ಬ್ಲ್ಯಾಕ್‌ ಮೇಲ್ ಮಾಡಬಹುದು. ವೈಯಕ್ತಿಕ ವಿಚಾರವನ್ನ ಸಿಬಿಐ ಕೊಡಲು ಬರುವುದಿಲ್ಲ ಎಂದು ತಿಳಿಸಿದರು.

ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ: ಶಾಸಕ ಜಮೀರ್‌ ಅಹಮದ್‌

ಸಿದ್ದರಾಮಯ್ಯ ಕೂಡ ಟಿಕೆಟ್‌ ಆಕಾಂಕ್ಷಿ: ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಆಗುವವರೆಗೂ ಚಾಮರಾಜ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ ಆಗಿದ್ದಾರೆ. ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕಿಂತ ಮುನ್ನ ಎಲ್ಲರೂ ಆಕಾಂಕ್ಷಿಗಳೇ ಆಗಿದ್ದಾರೆ. ಆದರೆ, ಯಾರೊಬ್ಬರೂ ಎರಡು ಕ್ಷೇತ್ರಗಳಿಗೆ ಟಿಕೆಟ್ ಆಕಾಂಕ್ಷಿಗಳಿಲ್ಲ. ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.