ಚಿಕ್ಕಬಳ್ಳಾಪುರ ರಣಕಣ: ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊಯ್ಲಿ ಕಸರತ್ತು..!
1952-1977 ಕೋಲಾರದ ಜತೆ ಜಂಟಿ ಲೋಕ ಸಭಾ ಕ್ಷೇತ್ರವಾಗಿತ್ತು. 1977ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಕರ್ನಾಟಕದ ಮೊದಲ ಸಿಎಂ ಕೆ.ಸಿ.ರೆಡ್ಡಿ, ಎಂ.ವಿ.ಕೃಷ್ಣಪ್ಪ, ಎಸ್.ಎನ್.ಪ್ರಸನ್ನ ಕುಮಾರ್, ವಿ.ಕೃಷ್ಣರಾಂ. ಆರ್.ಎಲ್.ಜಾಲಪ್ಪ, 2009ರಲ್ಲಿ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಹೀಗಾಗಿ, ಈ ಜಿಲ್ಲೆಯಲ್ಲಿ ಆರಂಭದಿಂದಲೂ ಕಾಂಗ್ರೆಸ್‌ನದ್ದೇ ದರ್ಬಾರು.
ಚಿಕ್ಕಬಳ್ಳಾಪುರ(ಜ.10): 1977ರಲ್ಲಿ ಅಸ್ತಿತ್ವಕ್ಕೆ ಬಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ನದೇ ಪಾರುಪತ್ಯ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಹೊಸಕೋಟೆ, ದೇವ ನಹಳ್ಳಿ, ನೆಲಮಂಗಲ, ಯಲಹಂಕ ವಿಧಾನಸಭಾ ಕ್ಷೇತ್ರಗಳಿವೆ. 1952-1977 ಕೋಲಾರದ ಜತೆ ಜಂಟಿ ಲೋಕಸಭಾ ಕ್ಷೇತ್ರವಾಗಿತ್ತು. 1977ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಕರ್ನಾಟಕದ ಮೊದಲ ಸಿಎಂ ಕೆ.ಸಿ.ರೆಡ್ಡಿ, ಎಂ.ವಿ.ಕೃಷ್ಣಪ್ಪ, ಎಸ್.ಎನ್.ಪ್ರಸನ್ನ ಕುಮಾರ್, ವಿ.ಕೃಷ್ಣರಾಂ. ಆರ್.ಎಲ್.ಜಾಲಪ್ಪ, 2009ರಲ್ಲಿ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಹೀಗಾಗಿ, ಈ ಜಿಲ್ಲೆಯಲ್ಲಿ ಆರಂಭದಿಂದಲೂ ಕಾಂಗ್ರೆಸ್‌ನದ್ದೇ ದರ್ಬಾರು.
ಇನ್ನು, 2019ರ ಲೋಕಸಭಾ ಚುನಾವಣೆಯಲ್ಲಿ ಕಮಲ ಪಾಳಯದ ಬಿ. ಎನ್.ಬಚ್ಚೇಗೌಡ ಗೆಲುವು ದಾಖಲಿಸುವ ಮೂಲಕ 'ಕೈ' ಪಾಳಯಕ್ಕೆ ಶಾಕ್ ನೀಡಿದ್ದರು. ಹಾಲಿ ಸಂಸದ ಬಚ್ಚೇಗೌಡ ಅನಾರೋಗ ಹಾಗೂ ವಯಸ್ಸಿನ ಕಾರಣದಿಂದಾಗಿ ಈಗಾ ಗಲೇ ರಾಜಕೀಯ ನಿವೃತ್ತಿ ಕಳೆದ 3 ಲೋಕಸಭಾ ಚುನಾವಣೆಗಳಲ್ಲಿ ಕ್ಷೇತ್ರದ ಉಸ್ತುವಾರಿಯಾ ಗಿದ್ದ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರು ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ವಿಷಯ ತಂದಿದ್ದು, ಟಿಕೆಟ್ ಪಡೆಯಲು ಪ್ರಯತ್ನ ಮುಂದುವರಿಸಿದ್ದಾರೆ.
ಪ್ರಲ್ಹಾದ್ ಜೋಶಿಗೆ ಸರಿಸಾಟಿ ‘ಕೈ’ ಅಭ್ಯರ್ಥಿ ಯಾರು?: ಲಾಡ್, ಶೆಟ್ಟರ್ ಹೆಸರು ಮುಂಚೂಣಿಗೆ
ಇದೇ ವೇಳೆ, ಬಿಜೆಪಿ ಬೆಂಗಳೂರು ಗ್ರಾಮಾಂ ತರ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಕೂಡ ಟಿಕೆಟ್‌ಗಾಗಿ ಕಸರತ್ತು ಆರಂಭಿಸಿದ್ದಾರೆ. ಜೊತೆಗೆ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾವ್ಯದರ್ಶಿ ಬಿ.ಎಲ್.ಸಂತೋಷ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಬಿಜ್ಜವರ ಲೋಕೇಶ್ ಸಹ ಟಿಕೆಟ್‌ಗಾಗಿ ಕಸರತ್ತು ನಡೆಸಿ ಬಹುತೇಕ ನಾಯಕರೊಂದಿಗೆ ಟಿಕೆಟ್ ವಿಚಾರವಾಗಿ ಮಾತನಾಡಿದ್ದು, ಚುನಾವಣೆಯ ಅಧಿ ಕೃತಪ್ರಚಾರಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳು ತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹಾಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ. ಮುನಿರಾಜು, ಮಾಜಿ ಸಚಿವಡಾ.ಕೆ.ಸುಧಾಕರ್ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಕೂಡ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಹೊಸಬರ ಪ್ರವೇಶಕ್ಕೆ ಒಲವು: ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿದ್ದ ಚಿಕ್ಕಬಳ್ಳಾಪುರ ಕಳೆದ ಚುನಾವಣೆಯಲ್ಲಿ ಕಮಲ ಆರ ಇದ್ದು, ಈ ಬಾರಿ ಹೊಸಬರ ಪ್ರವೇಶಕ್ಕೆ ಕಣಸಿದ್ದ ವಾಗುತ್ತಿರುವಂತೆ ಕಂಡು ಬರುತ್ತಿದೆ. ಈಗಾಗಲೇ ಕಾಂಗ್ರೆಸ್‌ನಿಂದ ಟಿಕೆಟ್ ತಮಗೇ ಎಂಬಂತೆ ಕ್ಷೇತ್ರದಲ್ಲೇ ಬೀಡು ಬಿಟ್ಟಿರುವ ಮಾಜಿ ಸಂಸದ ವೀರಪ್ಪ ಮೊಯ್ಲಿ ಜತೆಗೆ ಹಿರಿಯರು, ಕಿರಿಯರು ಟಿಕೆಟ್‌ಗಾಗಿ ಪ್ರಯತ್ನ ಮುಂದುವರೆಸಿದ್ದಾರೆ.
ಒಂದು ಕಡೆ ರಕ್ಷಾ ರಾಮಯ್ಯ ಟಿಕೆಟ್‌ಗಾಗಿ ಯತ್ನಿಸುತ್ತಿದ್ದರೆ, ಮತ್ತೊಂದೆಡೆ jಮಾಜಿ ಸಚಿವ ಶಿವಶಂಕರ್ ರೆಡ್ಡಿ ಸಹ ಟಿಕೆಟ್ ಗಾಗಿ ಲಾಬಿ ನಡೆಸಿ ದ್ದಾರೆ. ಇನ್ನು, ಜೆಡಿಎಸ್ ಜೊತೆ ಮೈತ್ರಿ ಮಾಡಿ ಕೊಂಡಿದ್ದರೂ, ಬಿಜೆಪಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹೀಗಾಗಿ, ಜೆಡಿಎಸ್‌ನಲ್ಲಿ ಟಿಕೆಟ್‌ಗಾಗಿ ಅಂತಹ ಲಾಬಿ ಕಂಡು ಬರುತ್ತಿಲ್ಲ. ಹೀಗಾಗಿ, ಜೆಡಿಎಸ್ ಜೊತೆಗಿನ ಮೈತ್ರಿಯ ನೆರವು ಹಾಗೂ ಮೋದಿ ಅಲೆಯ ಮೇಲೆ ಸ್ಪರ್ಧಿಸಿ, ಗೆಲುವು ಸುಲಭ ಗೊಳಿಸಿಕೊಳ್ಳುವುದು ಬಿಜೆಪಿ ಟಿಕೆಟ್ ಆಕಾಂಕ್ಷಿ ಗಳ ಯೋಜನೆ. ಈ ಮಧ್ಯೆ, ಜೆಡಿಎಸ್ ನಾಯ ಕರ ಅಭಿಪ್ರಾಯ ಕೂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಯನ್ನು ಅಲ್ಲಗಳೆಯುವಂತಿಲ್ಲ.
ಇನ್ನೊಂದೆಡೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆದು, ಕ್ಷೇತ್ರದಲ್ಲಿ ಪಕ್ಷದ ಪಾರುಪತ್ಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗೆಲ್ಲುವ ಅಭ್ಯರ್ಥಿ ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿದ್ದಾರೆ.