Asianet Suvarna News Asianet Suvarna News

ಸಿಎಂ ಪ್ರಮಾಣವಚನ: ಕಂಠೀರವ ಸ್ಟೇಡಿಯಂ ಸುತ್ತಲೂ ವಾಹನ ಸಂಚಾರ, ಪಾಕಿಂಗ್‌ ನಿರ್ಬಂಧ

ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಸುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Vehicular movement parking restrictions around Kantheerava Stadium at Bengaluru sat
Author
First Published May 19, 2023, 7:38 PM IST

ಬೆಂಗಳೂರು (ಮೇ 19): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗಳಿಸಿದ ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ನಾಳೆ (ಮೇ 20ರ ಶನಿವಾರ)  ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ.

ಕಂಠೀರವ ಸ್ಟೇಡಿಯಂ ಸುತ್ತಾ ಮುತ್ತಾ ಸಂಚಾರ ದಟ್ಟಣೆ ಸಾದ್ಯತೆ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಸಂಪರ್ಕವಾಗಿವ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಸಂಚಾರಿ ಪೊಲೀಸರಿಂದ ಮಾರ್ಗಸೂಚಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಸಂಚರಿಸದಂತೆ ಸೂಚನೆ ನೀಡಲಾಗಿದೆ. 

ಯಾವ ರಸ್ತೆಗಳು ನಿರ್ಬಂಧ, ಪರ್ಯಾಯ ಮಾರ್ಗಗಳು ಯಾವುವು?: 

  • 1) ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧ ಮಾಡಲಾಗಿದೆ. ಕ್ವೀನ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲಿ ರಸ್ತೆ ಅಥವಾ ಕ್ವಿನ್ಸ್ ರಸ್ತೆಯ ಮೂಲಕ ಸಂಚಾರಕ್ಕೆ ಮಾಡಬಹುದು. 
  • 2) ಬಾಳೇಕುಂದ್ರಿ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ತೆರಳುವ ವಾಹನಗಳು- ಪಟ್ಟಾ ಜಂಕ್ಷನ್ ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ದೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್‌ ತಿಮ್ಮಯ್ಯ ವೃತ್ತದಲ್ಲಿ ತಿರುವು ಪಡೆದು ಸಂಚರಿಸಬಹುದು.
  • 3) ಸಿಟಿಓ ವೃತ್ತದಿಂದ ಕ್ವೀನ್ ವೃತ್ತದ ಕಡೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್ ರಸ್ತೆಯ ಮುಖೇನ ಅನಿಲ್ ಕುಂಬ್ಳೆ ವೃತ್ತದ ಕಥೆಗೆ ಅಥವಾ ಮಣಿಪಾಲ್‌ ಸೆಂಟರ್ ಕಡೆಗೆ ಸಂಚರಿಸಬಹುದು. 
  • 4) ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. 

ಕಾರ್ಯಕ್ರಮಕ್ಕೆ ಬರೋ ವಿವಿಐಪಿ, ವಿಐಪಿಗಳ  ವಾಹನಗಳಿಗೆ ಸೆಂಟ್ ಜೋಸೆಫ್‌ ಕಾಲೇಜ್‌ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳು, ಸಿಬ್ಬಂದಿಗೆ ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗೂ ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ: ಆರ್.ಆರ್.ಎಂ.ಆರ್ ರಸ್ತೆ, ಕಸ್ತೂರಿಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲ ಮಾದರಿಯ ವಾಹನಗಳ ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದೆ. 

ಕಾರ್ಯಕ್ರಮಕ್ಕೆ ಬರೋರಿಗೆ ಎಂಟ್ರಿ ಹೇಗೆ..? : ವಿವಿಐಪಿ, ವಿವಿಐಪಿಗಳಿಗೆ ವಾಹನದಿಂದ ಇಳಿದ ನಂತರ ಕೆ.ಬಿ. ರಸ್ತೆ, ತಮ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್‌ ಗಳ ಮೂಲಕ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಹಾಗೂ ಜನಸಾಮಾನ್ಯರು ಕೆ.ಜಿ. ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ, ರಿಚ್ ಮಂಡ್ ಸರ್ಕಲ್ ಬಳಿ ಅಥವಾ ಕ್ವಿನ್ಸ್ ಸರ್ಕಲ್ ಬಳಿ ಕ್ರೀಡಾಂಗಣ ಪ್ರವೇಶಕ್ಕೆ ಅನುಕೂಲ ಮಾಡಲಾಗಿದೆ.

ವಿಶೇಷ ಸೂಚನೆಗಳು:
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು, ಬೆಂಕಿಪಟ್ಟಣ, ಲೈಟರ್‌ಗಳು ತರದಂತೆ ಸೂಚನೆ ನೀಡಲಾಗಿದೆ. ಮುಖ್ಯ ಕೆಲಸಗಳು, ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬೆಳಿಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚನೆ ನೀಡಲಾಗಿದೆ.

Follow Us:
Download App:
  • android
  • ios