ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯತ್ನಾಳ

ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ. ಬಳಿಕ ಮತ್ತೆ ರಾಜ್ಯದಲ್ಲಿ ನಾವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ 

Vijayapura BJP MLA Basanagouda Patil Yatnal Slams Karnataka Congress Government grg

ವಿಜಯಪುರ(ಮಾ.09): ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಭವಿಷ್ಯ ನುಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ. ಬಳಿಕ ಮತ್ತೆ ರಾಜ್ಯದಲ್ಲಿ ನಾವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಹಿಂದೂ ವಿರೋಧಿ ಬಗ್ಗೆ ಯಾವುದೇ ಪಠ್ಯಕ್ರಮದಲ್ಲಿ ಸೇರಿಸಿದರೂ ನಾವೆಲ್ಲ ತೆಗೆದು ಹಾಕಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಆದ್ದರಿಂದ ಸಚಿವ ಮಧು ಬಂಗಾರಪ್ಪ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು.

ಪ್ರಚೋದನಾಕಾರಿ ಭಾಷಣ: ಯತ್ನಾಳ್‌ ವಿರುದ್ಧ ದೂರು

ನಾಸೀರ್‌ಗೆ ಪ್ರಮಾಣವಚನ ಬೋಧಿಸಬೇಡಿ:

ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸೀರ್ ಹುಸೇನ್‌ಗೆ ಪ್ರಮಾಣ ವಚನ ಬೋಧಿಸಬಾರದು. ಪ್ರಕರಣದ ತನಿಖೆ ಮುಗಿಯುವವರೆಗೂ ಅವರಿಗೆ ಪ್ರಮಾಣ ವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಯತ್ನಾಳ ಮನವಿ ಮಾಡಿದರು. ಘೋಷಣೆ ಕೂಗಿದ ವ್ಯಕ್ತಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ನಿಕಟ ಸಂಬಂಧ ಹೊಂದಿದ್ದಾರೆ. ಇದರಲ್ಲಿ ನಾಸೀರ್ ಪಾತ್ರವೂ ಇದ್ದೇ ಇದೆ‌ ಎಂದು ಹೇಳಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಒಂದು ವ್ಯವಸ್ಥಿತ ಜಾಲವಾಗಿದೆ. ಬಾಂಬ್ ಸ್ಫೋಟಕ್ಕೂ, ಪಾಕಿಸ್ತಾನ, ಐಎಸ್‌ಐಎಸ್‌ಗೂ ಲಿಂಕ್ ಇದೆ. ಸ್ಫೋಟದ ಹಿಂದೆ ಭಾರತವನ್ನು ಇಸ್ಲಾಮಿಕರಣ ಮಾಡುವ ಸಂಚು ಇದೆ. ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟಿಕರಣದಿಂದ ಬಾಂಬರ್‌ಗಳಿಗೆ ಸ್ವಾತಂತ್ರ್ಯ ಸಿಕ್ಕಂತಾಗಿದೆ ಎಂದು ದೂರಿದರು. ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ‌ ನಡ್ಡಾ ಅವರಿಗೆ ತಿಳಿಸಿದ್ದೇನೆ ಎಂದು ಇದೆ ವೇಳೆ ಅವರು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios