Asianet Suvarna News Asianet Suvarna News

Vijayapura: ನಾಳೆ ಮಹಾನಗರ ಪಾಲಿಕೆ ಚುನಾವಣೆ: ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ದಾನಮ್ಮನವರ್ ಭೇಟಿ!

ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ ಮಸ್ಟರಿಂಗ್ ಕೇಂದ್ರವಾದ ವಿಜಯಪುರ ವಿ.ವಿ ದರಬಾರ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಗುರುವಾರ ಭೇಟಿ ನೀಡಿ, ಸಕಲ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

vijayapura corporation election on october 28th dc vijayamahantesh danammanavar visit mustering centre gvd
Author
First Published Oct 27, 2022, 10:28 PM IST

ಷಡಕ್ಷರಿ‌ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್, ವಿಜಯಪುರ

ವಿಜಯಪುರ (ಅ.27): ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ ಮಸ್ಟರಿಂಗ್ ಕೇಂದ್ರವಾದ ವಿಜಯಪುರ ವಿ.ವಿ ದರಬಾರ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಗುರುವಾರ ಭೇಟಿ ನೀಡಿ, ಸಕಲ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

ಜವಾಬ್ದಾರಿ ನಿಭಾಯಿಸಲು ಸಿಬ್ಬಂದಿ, ಅಧಿಕಾರಿಗಳಿಗೆ ಡಿಸಿ ಸೂಚನೆ: ಈ ಸಂದರ್ಭದಲ್ಲಿ ಮಸ್ಟರಿಂಗ್ ಕೇಂದ್ರದ ಸಿಬ್ಬಂದಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಶಾಂತಿಯುತ ಚುನಾವಣೆ -ಮತದಾನಕ್ಕಾಗಿ ತಮಗೆ ವಹಿಸಿದ ಜವಾಬ್ದಾರಿಯಿಂದ ಅತ್ಯಂತ ಸಮರ್ಥವಾಗಿ ನಿಭಾಯಿಸಬೇಕು. ಚುನಾವಣಾ ಕಾರ್ಯದಲ್ಲಿ ಯಾವುದೇ ಅಡೆ-ತಡೆ ಗೊಂದಲ ಉಂಟಾದಲ್ಲಿ  ಸಮಾಧಾನದಿಂದ ಪರಿಹರಿಸಿಕೊಳ್ಳಲು ಪ್ರಯತ್ನಿಸಿ, ಆದಾಗ್ಯೂ ಯಾವುದೇ ಸಮಸ್ಯೆ ಉಂಟಾದಲ್ಲಿ ಸೆಕ್ಟರ್ ಅಧಿಕಾರಿ, ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ,ಪರಿಹಾರ ಕಂಡುಕೊಂಡು ದೃತಿಗೆಡದೆ ಯಾವುದೇ ಲೋಪವಾಗದಂತೆ  ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ನಾಳೆಯೇ ವಿಜಯಪುರ ಮಹಾನಗರ ಪಾಲಿಕೆಗೆ ಮತದಾನ! ರೌಡಿಗಳ ಮೇಲೆ ಹದ್ದಿನ ಕಣ್ಣು

ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ: ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ, ಅತ್ಯಂತ  ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌: ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ  ಎಚ್.ಡಿ. ಆನಂದಕುಮಾರ್ ಅವರು ಪಾರದರ್ಶಕ ಚುನಾವಣೆಗಾಗಿ ಎಲ್ಲ ಸೂಕ್ತ ಪೋಲಿಸ್ ಬಂದೋಬಸ್ತ ಕಲ್ಪಿಸಲಾಗಿದ್ದು, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಇಲಾಖೆಯಿಂದ ನಿಯೋಜಿಸಿ ಸೂಕ್ತ ನಿಗಾ ವಹಿಸುವಂತೆ ಪೋಲಿಸ್ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಸ್ಥಾಪಿಸಲಾದ ಎಲ್ಲಾ ಮತಗಟ್ಟೆ ಕೇಂದ್ರಗಳಿಗೆ ಸಂಬಂಧಿಸಿದ ಮತದಾನದ ಸಾಮಗ್ರಿಗಳೊಂದಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ಬಸ್ಸಿನ ಮೂಲಕ  ತೆರಳಿದರು.

ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಶಂಕರಗೌಡ ಸೋಮನಾಳ, ಕೋಶದ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ, ವಿಜಯಪುರ ತಹಶೀಲ್ದಾರ ಸಿದ್ರಾಯ ಬೋಸಗಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯಪುರ ಪಾಲಿಕೆ ಚುನಾವಣೆ: ಯೂಟ್ಯೂಬ್ ಸ್ಟಾರ್‌ನಿಂದ ಮತದಾನ ಜಾಗೃತಿ..!

ಪಾಲಿಕೆ ವ್ಯಾಪ್ತಿಯ ಶಾಲಾ - ಕಾಲೇಜುಗಳಿಗೆವ ರಜೆ ಘೋಷಣೆ: ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು,  ನಾಳೆ ಮತದಾನ ಜರುಗಲಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆಗಳನ್ನು ಹೊಂದಿರುವ ಶಾಲಾ ಕಾಲೇಜು, ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳಿಗೆ ಅ.27ರ ಅಪರಾಹ್ನ ಮತ್ತು ಮತದಾನ ದಿನ ಅ.28ರಂದು ರಜೆಯನ್ನು ಘೋಷಿಸಲಾಗಿದೆ. ಜಿಲ್ಲಾ‌ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow Us:
Download App:
  • android
  • ios