ವಿಜಯಪುರ, (ಆ.16): ಜಿಲ್ಲೆಯ ದೇವರ ಹಿಪ್ಪರಿಗೆ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದಾರೆ. ಕಳೆದ ಆ.13ರಂದು ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದ ಶಾಸಕರು ಬೆಂಗಳೂರಿಗೆ ತೆರಳಿದ್ದರು. ಕಳೆದ ರಾತ್ರಿ ಕೋವಿಡ್ ಪರೀಕ್ಷೆಯ ವರದಿ ಬಂದಿತ್ತು. ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರಿಗೆ ಕೊರೋನಾ ಪಾಸಿಟಿವ್..!

ಸದ್ಯ, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಯಾರೂ ಆತಂಕ ಪಡಬೇಕಾ ಗಿಲ್ಲ ಎಂದು ಟ್ವಿಟ್ ಮಾಡಿದ್ದಾರೆ. 

ಬೇಗನೆ ಗುಣಮುಖರಾಗಿ ಬರುತ್ತೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.