ವಿಜಯಪುರ, (ಸೆ.07): ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರವಿಗೌಡ ಪಾಟೀಲ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 

ಮೃತರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ ವಾರ ಕೋವಿಡ್ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ, ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸೋಲಾಪುರ ನಂತರ ಪುಣೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲೂ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಪುಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳುತಿ ಳಿಸಿವೆ.

ಮಾಜಿ ಶಾಸಕರ ಪುತ್ರ ಕೊರೋನಾ ಸೋಂಕಿಗೆ ಬಲಿ

 2013 ರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಇನ್ನು ಎರಡು ವಾರಗಳ ಹಿಂದೆ ಅಷ್ಟೇ ರವಿಗೌಡ ಅವರ ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದರು.

ಇನ್ನು ಭಾನುವಾರ ಔರಾದ ತಾಲೂಕಿನ ಸಂತಪೂರ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಶಾಸಕ ಗುಂಡಪ್ಪ ವಕೀಲ ಅವರ ಪುತ್ರ ಅನೀಲ್ ಗುಂಡಪ್ಪ ಬಿರಾದಾರ (47) ಹೆಮ್ಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.