ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ: ಬಿ.ಎಸ್‌.ಯಡಿಯೂರಪ್ಪ 

ಶಿಕಾರಿಪುರ(ಮೇ.11): ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ ಅಂತ ತಿಳಿಸಿದ್ದಾರೆ. 

ಕಾಂಗ್ರೆಸ್‌ ದ್ವೇಷ ಸೃಷ್ಟಿ​ಸು​ತ್ತಿದೆ, ಎಚ್ಚ​ರಿಕೆ ಇರ​ಲಿ: ​ಹರತಾಳು ಹಾ​ಲಪ್ಪ

ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.